ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಗೆ ಕೋವಿಡ್
Team Udayavani, Jun 25, 2020, 12:14 PM IST
ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಬೆಂಗಳೂರಿನಿಂದ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 28 ವರ್ಷದ ವ್ಯಕ್ತಿಯಲ್ಲಿ ಸೋಂಕಿರುವುದು ಬುಧವಾರ ಪತ್ತೆಯಾಗಿದೆ.
ಸೋಂಕಿತ ವ್ಯಕ್ತಿಯ ಆರೋಗ್ಯ ತಪಾಸಣೆ ಮಾಡಿದ್ದ ಸರ್ಕಾರಿ ವೈದ್ಯ ಹಾಗೂ ಖಾಸಗಿ ವೈದ್ಯ ಸೇರಿ 40 ಮಂದಿ ಆರೋಗ್ಯ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಕುವೆಂಪು ನಗರದ ಬಡಾವಣೆಯಲ್ಲಿರುವ ಸಂಬಂಧಿಕರ ಮನೆಗೆ ಬೆಂಗಳೂರಿನಿಂದ ಇತ್ತೀಚೆಗೆ ಆಗಮಿಸಿದ್ದ ಇಂಜಿನಿಯರ್ ಯುವಕ ನಲ್ಲಿ ಸೋಂಕಿರುವುದು ಬುಧವಾರ ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.
28 ವರ್ಷದ ವ್ಯಕ್ತಿಗೆ ಬೆಂಗಳೂರಿನಿಂದ ಬಂದ ಬಳಿಕ ಜ್ವರ ಕಾಣಿಸಿಕೊಂಡಿದೆ. ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ತಪಾಸಣೆ ಮಾಡಿಸಿದ್ದಾನೆ. ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಸೇರಿ 40 ಮಂದಿ ಆರೋಗ್ಯ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳ ಪಡಿಸಲಾಗಿದೆಂದು ತಿಳಿದುಬಂದಿದೆ.
ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಕ್ಕೆ ಸೋಂಕಿತ ಭೇಟಿ ನೀಡಿದ್ದು, ತುರ್ತು ಚಿಕಿತ್ಸಾ ಘಟಕದ ಸಿಬ್ಬಂದಿಯಲ್ಲೂ ಆತಂಕ ಎದುರಾಗಿದೆ. ಕುವೆಂಪು ನಗರದ ಸಂಬಂಧಿಕರ ಮನೆ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿನ ಪತ್ತೆ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.