3 ಸಾವಿರ ಹಾವು ರಕ್ಷಿಸಿದ ಡ್ಯಾನಿಗೆ ಕಚ್ಚಿದ ಹಾವು !
Team Udayavani, Jun 25, 2020, 1:28 PM IST
ಬಾಗಲಕೋಟೆ: ನಗರದಲ್ಲಿ ಹಲವು ಸಾಮಾಜಿಕ ಸೇವೆ, ಹೋರಾಟದ ಮೂಲಕ ಗಮನ ಸೆಳೆದ ಡ್ಯಾನಿಯಲ್ ನ್ಯೂಟನ್‌ಗೆ ಬುಧವಾರ ಮಧ್ಯಾಹ್ನ ಹಾವು ಕಚ್ಚಿದ್ದು, ತೀವ್ರ ಅಸ್ವಸ್ಥಗೊಂಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ನಗರ, ಗ್ರಾಮೀಣ ಭಾಗದಲ್ಲಿ ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಡುವ ಕಾರ್ಯದಲ್ಲಿ ತೊಡಗಿದ್ದ ಡ್ಯಾನಿಯಲ್ ಅವರಿಗೆ ಈವರೆಗೆ ಒಟ್ಟು 67 ಬಾರಿ ಹಾವು ಕಚ್ಚಿದ್ದರೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದರೆ, ಬುಧವಾರ ಮನೆಯೊಂದರ ಬಳಿ ಬಂದಿದ್ದ ಮಿಡಿ ನಾಗರಹಾವು ಹಿಡಿದು ಕಾಡಿಗೆ ಬಿಡಲು ತಯಾರಿಯಾಗಿದ್ದರು. ಹಾವು ಹಿಡಿದ ಬಳಿಕ ಮನೆಗೆ ಹೋಗಿ ಇಟ್ಟಿದ್ದರು. ಈ ವೇಳೆ, ಹಾವು ಕಚ್ಚಿದ್ದು, ತೀವ್ರ ಅಸ್ವಸ್ಥಗೊಂಡಿದ್ದರು. ಬಳಿಕ ಅವರ ಸ್ನೇಹಿತರು, ಮನೆಯವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡ್ಯಾನಿಯಲ್ ನ್ಯೂಟನ್ ಅವರು, ಅತ್ಯಂತ ಅಪಾಯಕಾರಿ ಸ್ಥಳಗಳಲ್ಲಿ ಹಾವುಗಳಿದ್ದರೂ ಅವುಗಳನ್ನು ರಕ್ಷಿಸಿ ಕಾಡಿಗೆ ಬಿಡುತ್ತಿದ್ದರು. ಇಲ್ಲಿಯ ವರೆಗೆ 3031 ಹಾವು ರಕ್ಷಣೆ ಮಾಡಿದ್ದಾರೆ.
ಅದರಲ್ಲಿ 997 ನಾಗರಹಾವು ಹಿಡಿದಿದ್ದರು. ಒಟ್ಟಾರೆ 67 ಬಾರಿ ಹಾವು ಕಚ್ಚಿತ್ತು. ಹಾವುಗಳ ರಕ್ಷಣೆಯಲ್ಲಿ ಅರಣ್ಯ ಇಲಾಖೆ ತೀವ್ರ ನಿರ್ಲಕ್ಷ್ಯ ವಹಿಸಿದ್ದಾಗ, ತಾವು ಹಿಡಿದ ಹಾವುಗಳನ್ನೇ ಅರಣ್ಯ ಇಲಾಖೆ ಕಚೇರಿಯ ಬಾಗಿಲ ಬಳಿ ಬಿಟ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.