ಎಸ್ಸೆಸ್ಸೆಲ್ಸಿ ಪರೀಕ್ಷೆ ಎಚ್ಚರಿಕೆಯಿಂದ ನಡೆಸಿ: ರೇಣು
Team Udayavani, Jun 25, 2020, 12:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊನ್ನಾಳಿ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸೆಲ್ಸಿ ಪರೀಕ್ಷೆ ಬಹಳ ಪ್ರಮುಖವಾದ ಘಟ್ಟ. ಈ ಬಾರಿ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸಬೇಕಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಪಟ್ಟಣದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮಾಸ್ಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಏಪ್ರಿಲ್ ತಿಂಗಳಲ್ಲಿ ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೋವಿಡ್ ಸೋಂಕಿನಿಂದ ಎರಡು ತಿಂಗಳು ಮುಂದಕ್ಕೆ ಹಾಕಲಾಯಿತು. ಈಗಲೂ ನಮ್ಮಿಂದ ಭಯ ದೂರವಾಗಿಲ್ಲ. ಆದರೂ ಪರೀಕ್ಷೆಯನ್ನು ನಡೆಸಲೇಬೇಕಾದ ಒತ್ತಡದಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದಕ್ಕಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಶಿಕ್ಷಣ ಇಲಾಖೆ ಎಚ್ಚರಿಕೆಯಿಂದ ಯಶಸ್ವೀಯಾಗಿ ಪರೀಕ್ಷೆಗಳನ್ನು ಮುಗಿಸಿಕೊಡಬೇಕು. ಯಾವುದೇ ಅಪಸ್ವರಗಳು ಕೇಳಿಬರಬಾರದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ರಾಜೀವ್ ಮಾತನಾಡಿ, ಹೊನ್ನಾಳಿ ಬ್ಲಾಕ್ ನಲ್ಲಿ 10 ಪರೀಕ್ಷಾ ಕೇಂದ್ರಗಳು ಮತ್ತು 2 ಉಪ ಕೇಂದ್ರಗಳಿವೆ. ಹೊಸದಾಗಿ 1238 ಬಾಲಕರು, 1463 ಬಾಲಕಿಯರು ಸೇರಿ ಒಟ್ಟು 2701 ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು 150, ವಲಸೆ ಬಂದವರು 95 ಸೇರಿ ಒಟ್ಟು 2946 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದಲ್ಲಿ ಆಸನ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ವಾರಿಯರ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯುವವರಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ತಾಪಂ ಪ್ರಭಾರಿ ಅಧ್ಯಕ್ಷ ಕೆ.ಎಲ್. ರಂಗಪ್ಪ, ಸದಸ್ಯ ಎಸ್.ಪಿ. ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಸುರೇಶ್ ಮಾತನಾಡಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್, ಮುಖ್ಯಶಿಕ್ಷಕ ಎಚ್. ತಿಪ್ಪೇಶಪ್ಪ, ಇಸಿಒ ಸಿದ್ದಪ್ಪ, ಬಸವರಾಜಪ್ಪ ಹಾಗೂ ಶಿಕ್ಷಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.