ಗ್ರಂಥಾಲಯಗಳಲ್ಲಿ ಸೌಲಭ್ಯಗಳ ಕೊರತೆ; ಓದುಗರಿಗೆ ನಿರಾಸೆ

ಜಿಲ್ಲೆಯಲ್ಲಿ 147 ಗ್ರಾಮೀಣ ಲೈಬ್ರೆರಿ

Team Udayavani, Jun 25, 2020, 1:57 PM IST

ಗ್ರಂಥಾಲಯಗಳಲ್ಲಿ ಸೌಲಭ್ಯಗಳ ಕೊರತೆ; ಓದುಗರಿಗೆ ನಿರಾಸೆ

ಉಡುಪಿ: ಪುಸ್ತಕ ಅಭಿರುಚಿ ಮೂಡಿಸಲು ಅಸ್ತಿತ್ವಕ್ಕೆ ಬಂದ ಗ್ರಾಮೀಣ ಗ್ರಂಥಾಲಯಗಳು ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಜಿಲ್ಲೆಯಲ್ಲಿ ಗ್ರಾ.ಪಂ.ಗೆ ಒಂದರಂತೆ ಸುಮಾರು 147 ಗ್ರಾಮೀಣ ಗ್ರಂಥಾಲಯ ಗಳಿದ್ದು, ಅವುಗಳಿಗೆ ಸ್ವಂತ ಕಟ್ಟಡಗಳಿಲ್ಲ. ಗ್ರಾ. ಪಂ. ಕಚೇರಿಗಳ ಪಕ್ಕದ ಕೊಠಡಿಗಳಲ್ಲಿ, ಖಾಲಿ ಇರುವ ಕಟ್ಟಡಗಳು, ಶಾಲೆಗಳ ಕೊಠಡಿ ಮುಂತಾದೆಡೆ ಕಿರಿದಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

8 ಸ್ವಂತ ಕಟ್ಟಡಗಳಿಗೆ ಪ್ರಸ್ತಾವನೆ ಸಲ್ಲಿಕೆ
ಗ್ರಂಥಾಲಯ ಇಲಾಖೆಗೆ ಸೇರಿದ ನಲ್ಲೂರು ಮತ್ತು ಹೆಬ್ರಿ ಗ್ರಂಥಾಲಯಗಳು ಮಾತ್ರ ಸ್ವಂತ ಭೂಮಿ ಮತ್ತು ಕಟ್ಟಡ ಹೊಂದಿವೆ. ಉಳಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ 8 ಕಡೆಗಳಲ್ಲಿ ಸ್ವಂತ ಕಟ್ಟಡಕ್ಕೆ ನಿವೇಶನ ನೀಡುವಂತೆ ಈ ಹಿಂದೆಯೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇನ್ನೂ ಅನುಮೋದನೆ ಮಾತ್ರ ಸಿಕ್ಕಿಲ್ಲ.

ಪೀಠೊಪಕರಣಗಳೂ ಇಲ್ಲ
ಜಿಲ್ಲೆಯ ಗ್ರಂಥಾಲಯಗಳಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿಯಾಗಿದ್ದಂತೆ ಭಾಸವಾಗುತ್ತಿದೆ. ಆದರೆ ಬಹುತೇಕ ಗ್ರಂಥಾಲಯಗಳಲ್ಲಿ ಆವಶ್ಯಕ ಪುಸ್ತಕಗಳಿಲ್ಲ, ಇದ್ದವೂ ಸುರಕ್ಷಿತವಾಗಿಲ್ಲ. ಜತೆಗೆ ಇತರ ಹಲವು ಕೊರತೆಗಳೂ ಕಾಡುತ್ತಿವೆ. ಸರಿಯಾದ ಗಾಳಿ-ಬೆಳಕು, ಕಟ್ಟಡಗಳಲ್ಲಿ ಓದುಗರಿಗೆ ಅಗತ್ಯ ಕುರ್ಚಿ, ಟೇಬಲ್‌ಗ‌ಳೂ ಇಲ್ಲ. ಬಳಕೆಯಾಗದ ಕಂಪ್ಯೂಟರ್‌ ಕೆಲವು ಗ್ರಂಥಾಲಯಗಳಲ್ಲಿ ಕಂಪ್ಯೂಟರ್‌ಗಳಿದ್ದರೂ ಅದನ್ನು ಬಳಸುವ ತರಬೇತಿ ಪಡೆದ ಸಿಬಂದಿ ಕೊರತೆಯಿಂದ ನಿಷ್ಪ್ರಯೋಜಕವಾಗಿವೆ.

ಅನ್ಯಇಲಾಖೆಗೆ ವರ್ಗಾವಣೆ
ಗ್ರಾ.ಪಂ. ಗ್ರಂಥಾಲಯಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಗೆ ವರ್ಗಾಯಿಸಿ 2019ರ ಮಾರ್ಚ್‌ನಲ್ಲಿ ಸರಕಾರ ಆದೇಶ ನೀಡಿದೆ. ರಾಜ್ಯದಲ್ಲಿ ಒಟ್ಟು 5,766 ಗ್ರಾ.ಪಂ. ಗ್ರಂಥಾಲಯಗಳು ಕಾರ್ಯ ರ್ವಹಿಸುತ್ತಿವೆ. ಈ ಗ್ರಂಥಾಲಯಗಳಲ್ಲಿ ಗೌರವಧನ ಆಧಾರದ ಮೇಲೆ ಒಟ್ಟು
5,639 ಮೇಲ್ವಿಚಾರಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 5,766 ಗ್ರಾ.ಪಂ. ಗ್ರಂಥಾಲಯಗಳಲ್ಲಿ ಪಟ್ಟಣ ಪಂಚಾಯತ್‌,
ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿನ ಒಟ್ಟು 133 ಗ್ರಂಥಾಲಯ ಹಾಗೂ ಮೇಲ್ವಿಚಾರಕರನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿಯೇ ಉಳಿಸಿಕೊಳ್ಳಲಾಗಿತ್ತು. 5,633 ಗ್ರಾ.ಪಂ. ಗ್ರಂಥಾಲಯಗಳನ್ನು ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಮೂಲಕ ಗ್ರಾ.ಪಂ.ಗಳಿಗೆ ವರ್ಗಾಯಿಸಿದೆ.

ಲಾಕ್‌ಡೌನ್‌ ಬಳಿಕ ತೆರೆದಿಲ್ಲ
ಲಾಕ್‌ಡೌನ್‌ ತೆರವಿನ ಬಳಿಕ ರಾಜ್ಯದಲ್ಲಿ ಬಹುತೇಕ ಎಲ್ಲ ಸಾರ್ವಜನಿಕರ ಸೇವೆಗಳು ಆರಂಭವಾಗಿದ್ದರೂ ಗ್ರಂಥಾಲಯಗಳು ಇನ್ನೂ ಮುಚ್ಚಿವೆ. ಎಲ್ಲ
ಸೇವೆಗಳಿಗೆ ಅವಕಾಶ ನೀಡಿರುವಾಗ ಲೈಬ್ರೆರಿಗಳಿಗೆ ಮಾತ್ರ ಯಾಕಿಲ್ಲ ಎನ್ನುವುದು ಓದುಗರ ಪ್ರಶ್ನೆ.

ಅನುಮೋದನೆಗೆ ಬಾಕಿ
ಜಿಲ್ಲೆಯಲ್ಲಿ ಗ್ರಂಥಾಲಯ ಇಲಾಖೆ ವ್ಯಾಪ್ತಿಗೊಳಪಟ್ಟ 8 ಕಡೆಗಳಲ್ಲಿ ಸ್ವಂತ ಕಟ್ಟಡಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ಸಿಗಬೇಕಿದೆ.
– ನಳಿನಿ ಜಿ.ಐ., ಮುಖ್ಯ ಗ್ರಂಥಾಲಯಾಧಿಕಾರಿ,
ಜಿಲ್ಲಾ ಕೇಂದ್ರ ಗ್ರಂಥಾಲಯ , ಉಡುಪಿ.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.