ಸ್ವಯಂ ಜಾಗೃತರಾಗಬೇಕಿದೆ ಜನ
Team Udayavani, Jun 25, 2020, 4:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಗರಿಬೊಮ್ಮನಹಳ್ಳಿ: ಕೋವಿಡ್ ವೈರಸ್ ನಿಂದಾಗಿ ಇಡೀ ವಿಶ್ವವೇ ತಲ್ಲಣಗೊಂಡಿದೆ. ಕಣ್ಣಿಗೆ ಕಾಣದ ವೈರಸ್ ವಿರುದ್ಧ ನಾವೆಲ್ಲ ಹೋರಾಡಬೇಕಿದೆ ಎಂದು ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ಬಸವರೆಡ್ಡಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪುರಸಭೆ ಸಹಯೋಗದೊಂದಿಗೆ ಕಿರಾಣಿ ವರ್ತಕರ ಸಂಘದಿಂದ ನಡೆದ ಕೋವಿಡ್ ಜನಜಾಗೃತಿ ಕಾರ್ಯಕ್ರಮಕ್ಕೆ ಸ್ಯಾನಿಟೈಸರ್ ಸಿಂಪಡಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಮದ್ದಿಲ್ಲದ ಮಹಾಮಾರಿಯಾಗಿದೆ ಆದ್ದರಿಂದ ಸಾರ್ವಜನಿಕರು ಸ್ವಯಂ ಜಾಗೃತಿ ಹೊಂದಬೇಕು ಎಂದರು. ಜೂ.25ರಂದು ನಡೆಯುವ ಎಸ್ಸೆಎಸ್ಸೆಎಲ್‌ಸಿ ಪರೀಕ್ಷಾ ಕೇಂದ್ರಗಳಿಗೂ ಸಹ ಸ್ಯಾನಿಟೈಸರ್ ಸಿಂಪಡಣೆ ಮಾಡುತ್ತೇವೆ ಎಂದು ತಿಳಿಸಿದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಗಂಗಣ್ಣ ಮಾತನಾಡಿ, ಕೋವಿಡ್ ತಡೆಗಟ್ಟಲು ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಮಾತನಾಡಿದರು. ಕಿರಾಣಿ ವರ್ತಕರ ಸಂಘದ ಉಪಾಧ್ಯಕ್ಷ ರೂಪಾರಾಂಜೀ, ಕಾರ್ಯದರ್ಶಿ ಕುಮಾರ್, ಖಜಾಂಚಿ ಸಂದೀಪ್, ಕೊಟ್ರೇಶ್, ವೀರಯ್ಯ ಸ್ವಾಮಿ, ವಿಕ್ರಮ್, ವಿವಿಧ ವರ್ತಕರು, ಪರಿಸರ ಅಭಿಯಂತ ಜಗದೀಶ, ನೈರ್ಮಲ್ಯ ಮೇಸ್ತ್ರಿ ವೀರಣ್ಣ, ಪ್ರಭಾಕರ, ಆರೋಗ್ಯಾಧಿಕಾರಿ ಶಶಿಭೂಷಣ್ ಹಿರೇಮಠ, ನಾಗರತ್ನ, ಜಯಲಕ್ಷ್ಮಿ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.