![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 26, 2020, 6:30 AM IST
ಹೊಸದಿಲ್ಲಿ: ಇನ್ನೊಂದು ವಾರದೊಳಗೆ ಜಗತ್ತಿನ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ಒಂದು ಕೋಟಿಯನ್ನು ದಾಟಲಿದೆ!
ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಸೋಂಕುಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಈಗಾಗಲೇ 95 ಲಕ್ಷ ದಾಟಿದೆ. ಇದೇ ಗತಿಯಲ್ಲಿ ಮುಂದುವರಿದರೆ ಇನ್ನು ನಾಲ್ಕೈದು ದಿನಗಳಲ್ಲಿ ಈ ಸಂಖ್ಯೆ ಒಂದು ಕೋಟಿ ಮುಟ್ಟಬಹುದು ಎಂಬ ಎಚ್ಚರಿಕೆ ನೀಡಿದೆ.
ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಪ್ರಕಾರ ಅಮೆರಿಕ, ಬ್ರೆಜಿಲ್, ಮೆಕ್ಸಿಕೋ, ಚಿಲಿ, ಪೆರು ದೇಶಗಳಲ್ಲಿ ಸೋಂಕುಪೀಡಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಲೇ ಇದೆ. ಒಟ್ಟು ಸೋಂಕುಪೀಡಿತರಲ್ಲಿ 3ನೇ 1 ಭಾಗದಷ್ಟು ಮಂದಿ ಈ ಐದು ದೇಶಗಳಲ್ಲೇ ಇದ್ದಾರೆ.
ಅಮೆರಿಕದಲ್ಲೇ ಹೆಚ್ಚು
ಇಡೀ ಜಗತ್ತಿನಲ್ಲೇ ಅತೀ ಹೆಚ್ಚು ಕೊರೊನಾ ದಾಖಲಾಗಿರುವುದು ಅಮೆರಿಕದಲ್ಲಿ. ಇಲ್ಲಿ ಸುಮಾರು 24 ಲಕ್ಷ ಮಂದಿ ಸೋಂಕುಪೀಡಿತರಿದ್ದಾರೆ.
ಸಾವಿನ ಸಂಖ್ಯೆ 5 ಲಕ್ಷದ ಸನಿಹ
ಜಗತ್ತಿನಾದ್ಯಂತ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಕೆಲವೇ ದಿನಗಳಲ್ಲಿ 5 ಲಕ್ಷ ದಾಟುವ ಸಾಧ್ಯತೆ ಇದೆ. ಈಗಾಗಲೇ 4.85 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲೇ 1.24 ಲಕ್ಷ ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್ ಎರಡನೇ ಸ್ಥಾನದಲ್ಲಿದ್ದು, 53 ಸಾವಿರ ಮಂದಿ ಸಾವನ್ನಪ್ಪಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.