‘ಗ್ರೇ ಲಿಸ್ಟ್’ನಲ್ಲೇ ಇರಲಿದೆ ಪಾಕ್
Team Udayavani, Jun 26, 2020, 6:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ತನ್ನ ಮಣ್ಣಲ್ಲಿ ಉಗ್ರರನ್ನು ಪೋಷಿಸಿ ಇತರೆ ದೇಶಗಳ ವಿರುದ್ಧ ಛೂ ಬಿಡುವ ಪಾಕಿಸ್ಥಾನವನ್ನು ಅಕ್ಟೋಬರ್‌ವರೆಗೂ ಭಯೋತ್ಪಾದನಾ ಧನಸಹಾಯ ನಿಗ್ರಹ ಪಡೆ (ಎಫ್ಎಟಿಎಫ್) ಬೂದು ಪಟ್ಟಿಯಲ್ಲಿ ಮುಂದುವರಿಸಿದೆ.
ಪಾಕಿಸ್ಥಾನವು ಈಗಲೂ ಉಗ್ರರಿಗೆ ಸುರಕ್ಷಿತ ಸ್ವರ್ಗವಾಗಿದೆ ಎಂದು ಅಮೆರಿಕದ ವರದಿಯೊಂದು ಹೇಳಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಬುಧವಾರ ನಡೆದ ಹಣಕಾಸು ಕಾರ್ಯಪಡೆಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸಂಬಂಧ ಪಾಕಿಸ್ಥಾನಕ್ಕೆ ಕೆಲವೊಂದು ಕಾರ್ಯಸೂಚಿಗಳನ್ನು ನೀಡಿದ್ದರೂ, ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಆ ಕಾರ್ಯಸೂಚಿ ಪಾಲನೆ ಆಗಿದೆಯೇ ಎಂಬುದನ್ನು ಸದ್ಯಕ್ಕೆ ಪರಿಗಣಿಸಿಲ್ಲ. ಕಾರ್ಯಸೂಚಿಯಲ್ಲಿನ 27 ಅಂಶಗಳ ಪೈಕಿ ಪಾಕ್ ಇನ್ನೂ 13 ಅಂಶಗಳನ್ನು ಪೂರ್ಣಗೊಳಿಸಲು ಬಾಕಿಯಿದೆ.
ಅಕ್ಟೋಬರ್‌ನಲ್ಲಿ ನಡೆಯುವ ಮುಂದಿನ ಸಭೆಯಲ್ಲಿ ಈ ಕುರಿತು ಪರಿಶೀಲಿಸಲಾಗುತ್ತದೆ. ಅಲ್ಲಿಯವರೆಗೂ ಪಾಕಿಸ್ಥಾನವನ್ನು ಬೂದು ಪಟ್ಟಿಯಲ್ಲಿ ಮುಂದುವರಿಸಲು ನಿರ್ಧರಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರಿಗೆ ಹಣಕಾಸು ನೆರವು ನೀಡುವುದನ್ನು ಸ್ಥಗಿತಗೊಳಿಸುವಲ್ಲಿ ವಿಫಲವಾದ ಕಾರಣ 2018ರಿಂದಲೂ ಪಾಕ್ ಈ ಪಟ್ಟಿಯಲ್ಲೇ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.