ಬಾಕಿ ವೇತನಕ್ಕೆ ಅತಿಥಿ ಉಪನ್ಯಾಸಕರ ಆಗ್ರಹ
Team Udayavani, Jun 26, 2020, 7:17 AM IST
ಚಿಕ್ಕಬಳ್ಳಾಪುರ: ಅತಿಥಿ ಉಪನ್ಯಾಸಕರ ಹಾಗೂ ಶಿಕ್ಷಕರ ಬಾಕಿ ಇರುವ ಎಲ್ಲಾ ವೇತನ ಪಾವತಿ ಹಾಗೂ ಲಾಕ್‌ಡೌನ್ ನಿಂದಾಗಿ ಸಂಕಷ್ಟದಲ್ಲಿದ್ದು, ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಗುರುವಾರ ರಾಜ್ಯ ಅತಿಥಿ ಉಪನ್ಯಾಸಕರ ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತಮ್ಮ ಬೇಡಿಕೆಗಳ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು ಹಾಗು ಶಿಕ್ಷಕರು, ಕೂಡಲೇ ಬಾಕಿ ಇರುವ ನಾಲ್ಕೈದುತಿಂಗಳವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಕೋವಿಡ್ 19 ಸಂಕಷ್ಟದ ನಡುವೆಯು ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸುತ್ತಿದ್ದಾರೆ.
ಅನೇಕ ವರ್ಷಗಳಿಂದ ದುಡಿಯುತ್ತಿದ್ದರೂ ಯಾರಿಗೂ ಸೇವಾ ಭದ್ರತೆ ಇಲ್ಲ. ಸರ್ಕಾರ ನೇಮಕಾತಿ ವೇಳೆ ಆದ್ಯತೆ ನೀಡಿ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. ಕೋವಿಡ್ 19 ಹಿನ್ನೆಲೆಯಲ್ಲಿ ಸರ್ಕಾರ ಇತರೆ ವರ್ಗಗಳಿಗೆ ಘೋಷಿಸಿ ರುವಂತೆ ಅತಿಥಿ ಉಪನ್ಯಾಸಕರಿಗೂ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಚಿಂತಾಮಣಿಯ ಶಿವಕುಮಾರ್, ಮಂಜುನಾಥ, ಕೃಷ್ಣಮೂರ್ತಿ, ನಂದೀಶ್, ಓಬಳರೆಡ್ಡಿ, ಕಾಂತರಾಜು, ಕೃಷ್ಣಮೂರ್ತಿ, ನಾಗೇಂದ್ರಬಾಬು, ಶಿವಶಂಕರ್, ರಾಮ ಚಂದ್ರಪ್ಪ, ಮಂಜುನಾಥ, ಜಯಚಂದ್ರ, ನೀಲೂಫರ್ ಸೇರಿದಂತೆ ಜಿಲ್ಲೆಯ ಅತಿಥಿ ಉಪನ್ಯಾಸಕರು, ಶಿಕ್ಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.