ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಸಿಡಿಲಿನ ಹೊಡೆತ: ಒಂದೇ ದಿನ 107 ಜನರು ಬಲಿ
Team Udayavani, Jun 26, 2020, 8:09 AM IST
ಬಿಹಾರ: ಬಿಹಾರದಲ್ಲಿ ಗುರುವಾರ ಸಿಡಿಲಿನ ಹೊಡೆತಕ್ಕೆ ಸಿಲುಕಿ 83 ಜನರು ಸಾವನ್ನಪ್ಪಿದ್ದು, ಉತ್ತರಪ್ರದೇಶದಲ್ಲಿ 24 ಜನರು ಮೃತಪಟ್ಟಿದ್ದಾರೆ. ಹಾಗಾಗಿ ಒಂದೇ ದಿನ 107 ಜನರು ಬಲಿಯಾಗಿದ್ದು ಪ್ರಧಾನಿ ಮೋದಿ ಘಟನೆಯ ಕುರಿತು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಉತ್ತರ ಭಾರತದ ರಾಜ್ಯಗಳಲ್ಲಿ ಮುಂಗಾರು ಬಲಗೊಂಡಿದ್ದು, ಭಾರೀ ಮಳೆಯಾಗುತ್ತಿದೆ. .ಗುರುವಾರ ಸಂಜೆ, ಬಿಹಾರ ಸರ್ಕಾರವು ಸಿಡಿಲಿನ ಹೊಡೆತಕ್ಕೆ ಸಿಲುಕಿ 83 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಗೋಪಾಲಗಂಜ್ ಜಿಲ್ಲೆಯಿಂದ (13) ಹೆಚ್ಚಿನ ಸಾವುಗಳು ಸಂಭವಿಸಿವೆ. ಮೃತಪಟ್ಟವರ ಕುಟುಂಬಗಳಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಉತ್ತರ ಪ್ರದೇಶದಲ್ಲೂ ಕೂಡ ಸಿಡಿಲು ಬಡಿದು 24 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸರ್ಕಾರ ವರದಿ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ.ಪರಿಹಾರ ಘೋಷಿಸಿ ಸಂತಾಪ ಸೂಚಿಸಿದ್ದಾರೆ.
बिहार और उत्तर प्रदेश में कई स्थानों पर भारी बारिश और बिजली गिरने के कारण हुए जान-माल के नुक़सान के बारे में जानकर मुझे अत्यंत दुख पहुंचा है। इस दुर्घटना में कई लोगों को अपनी जान गंवानी पड़ी है।मैं मृतकों के परिजनों के प्रति अपनी हार्दिक संवेदनाएं व्यक्त करता हूँ।
— Rajnath Singh (@rajnathsingh) June 25, 2020
ಬಿಹಾರದಲ್ಲಿ 32 ಮತ್ತು ಉತ್ತರ ಪ್ರದೇಶದಲ್ಲಿ 12 ಜನರು ಸಿಡಿಲಿನ ಹೊಡತಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಮಾತ್ರವಲ್ಲದೆ ಹಲವಾರು ಆಸ್ತಿಪಾಸ್ಥಿಗಳು ಹಾನಿಗೊಮಡಿದ್ದು ಬಿಹಾರದಲ್ಲಿ 40 ಕ್ಕ ಹೆಚ್ಚು ಪ್ರಾಣಿಗಳು ಅಸುನೀಗಿವೆ.
ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಬಿಹಾರ ಮತ್ತು ಉತ್ತರ ಪ್ರದೇಶದ ರಾಜ್ಯ ಸರ್ಕಾರಗಳು ಪರಿಸ್ಥಿತಿಗೆ ಸೂಕ್ತವಾಗಿ ಸ್ಪಂದಿಸಲು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.