![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Jun 26, 2020, 10:45 AM IST
ರಾಯಚೂರು: ಮಾಸ್ಕ್ ಧರಿಸದೆ ಬೈಕ್ ಓಡಿಸುತ್ತಿದ್ದವರನ್ನು ಹಿಡಿದು ದಂಡ ಹಾಕಿ ಮಾಸ್ಕ್ ವಿತರಣೆ ಮಾಡುವ ಮೂಲಕ ಪೊಲೀಸ್ ಇಲಾಖೆ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮುಂದಾಗಿದೆ.
ಇತ್ತೀಚೆಗೆ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೊಲೀಸರಿಗೆ ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು ಗುರುವಾರ ಒಂದೇ ದಿನ 577 ಬೈಕ್ ಸವಾರರಿಗೆ ಬರೋಬ್ಬರಿ 74400 ರೂ. ದಂಡ ವಿಧಿಸಿದ್ದಾರೆ.
ಮಾಸ್ಕ್ ಧರಿಸುವಂತೆ ಸಾಕಷ್ಟು ಜಾಗೃತಿ ಮೂಡಿಸಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳದ ಕಾರಣ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದರೂ ಜನರು ಎಚ್ಚುತ್ತುಕೊಳ್ಳುತ್ತಿಲ್ಲ. ಮಾಸ್ಕ್ ಧರಿಸದೇ ಓಡಾಟ, ಸಾಮಾಜಿಕ ಅಂತರಕ್ಕೆ ಮಹತ್ವ ನೀಡದೇ ಇರುವುದು ಕಂಡು ಬರುತ್ತಿದೆ. ಇದರಿಂದ ಪೊಲೀಸ್ ಇಲಾಖೆ ರಸ್ತೆಗಿಳಿದಿದ್ದು, ದಂಡ ಬೀಳುವ ಭಯದಿಂದ ಆದರೂ ಜನರು ಮಾಸ್ಕ್ ಧರಿಸಲಿ ಎನ್ನುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.