ರಾಯಚೂರಿನ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಶಿಯನ್ ಗೆ ಕೋವಿಡ್ ಪಾಸಿಟಿವ್
Team Udayavani, Jun 26, 2020, 1:08 PM IST
ರಾಯಚೂರು: ಇಷ್ಟು ದಿನ ವಲಸಿಗರಲ್ಲೇ ಹೆಚ್ಚಾಗಿ ಕಂಡುಬರುತ್ತಿದ್ದ ಕೋವಿಡ್-19 ಪಾಸಿಟಿವ್ ಪ್ರಕರಣ ಹಂತ ಹಂತವಾಗಿ ಸಮುದಾಯಕ್ಕೂ ಹರಡುತ್ತಿದ್ದು ಈಗ ಆರೋಗ್ಯ ಇಲಾಖೆ ಸಿಬ್ಬಂದಿಗೂ ತಗುಲಿದೆ.
ಲ್ಯಾಬ್ ಟೆಕ್ನಿಶಿಯನ್ ಆಗಿದ್ದ ವ್ಯಕ್ತಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೊಬ್ಬ ಸಿಬ್ಬಂದಿಗೆ ತಗುಲಿರುವ ಶಂಕೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣಕ್ಕೆ ಎಲ್ಲ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸುವ ಸಾಧ್ಯತೆಗಳಿವೆ.
ಐದು ದಿನಗಳ ಬಳಿಕ ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸುವುದಾಗಿ ಇಲಾಖೆ ಮೂಲಗಳು ತಿಳಿಸಿವೆ. ಈಚೆಗೆ ಪಶ್ಚಿಮ ಠಾಣೆ ನಾಲ್ವರು ಪೊಲೀಸರಿಗೆ ಸೋಂಕು ತಗುಲಿತ್ತು. ಅವರು ಗುಣಮುಖರಾಗಿ ಬಿಡುಗಡೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.