ಗುಳೇದಗುಡ್ಡ ತಾಲೂಕು ಆಸ್ಪತ್ರೆ ಸಿಬ್ಬಂದಿಗೆ ಸೋಂಕು; ವೈದ್ಯರು ಸಹಿತ 30 ಜನ ಕ್ವಾರೆಂಟೈನ್
Team Udayavani, Jun 26, 2020, 3:16 PM IST
ಗುಳೇದಗುಡ್ಡ(ಬಾಗಲಕೋಟೆ) : ಪಟ್ಟಣದ ಸರಕಾರಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು ಇದರಿಂದ ಸರಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದ ಸಹಿತ 30 ಜನರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಆಸ್ಪತ್ರೆಯ ಡಿ ದರ್ಜೆ ನೌಕರನಿಗೆ ಸೋಂಕು ಪಾಸಿಟಿವ್ ಬಂದಿದ್ದು, ಸಮುದಾಯ ಆರೋಗ್ಯ ಕೇಂದ್ರ ಸಾನಿಟೈಸಿಂಗ್ ಮಾಡಲಾಗುತ್ತಿದೆ. ವೈದ್ಯರು, ಆಸ್ಪತ್ರೆ ಸಿಬ್ಬಂದಿ ಸೇರಿ 30 ಜನರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
ಕೋವಿಡ್-19 ಪಾಸಿಟಿವ್ ಬಂದಿರುವ ನೌಕರನ ಮನೆ ಸುತ್ತಮುತ್ತಲೂ ಸಾನಿಟೈಜಿಂಗ್ ಮಾಡಲಾಗುತ್ತಿದೆ. ಇದೀಗ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಕೋವಿಡ್-19 ಭೀತಿ ಎದುರಾಗಿದೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿದೆ. ಅಂತಿಮವಾಗಿ ಬೆಂಗಳೂರುರ ಪರೀಕ್ಷಾ ಕೇಂದ್ರಕ್ಕೆ ಗಂಟಲು ದ್ರವ ಮಾದರಿ ರವಾನೆ ಮಾಡಲಾಗಿದೆ.
ವೈದ್ಯರು, ಆಸ್ಪತ್ರೆಯ 30 ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದ್ದು, ಇಡೀ ಸಮುದಾಯ ಆರೋಗ್ಯ ಕೇಂದ್ರ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.