ಸಮರ್ಪಕ ನೀರು ಪೂರೈಕೆಗೆ ಕ್ರಮ
ಕುಡಿಯುವ ನೀರಿನ ಕೆರೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸವದಿ
Team Udayavani, Jun 26, 2020, 3:32 PM IST
ಲಿಂಗಸುಗೂರು: ಪಟ್ಟಣದ ಕುಡಿವ ನೀರಿನ ಕೆರೆಗೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.
ಲಿಂಗಸುಗೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕುಡಿವ ನೀರು ಸರಬರಾಜಿನಲ್ಲಿ ತೊಂದರೆ ಆಗಿದೆ. ಶೀಘ್ರವೇ ಕೆರೆಗಳನ್ನು ತುಂಬಿಸಿ ನೀರು ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ಕುಡಿಯುವ ನೀರಿನ ಕೆರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೆರೆಯಲ್ಲಿ ನೀರು ತಳ ಕಂಡಿದ್ದು ಸಕಾಲಕ್ಕೆ ಕೆರೆ ತುಂಬಿಸಿಕೊಳ್ಳಲು ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಈಗಾಗಲೇ ರಾಂಪುರ ಏತ ನೀರಾವರಿ ನಾಲೆಗಳ ಮೂಲಕ ಕೆರೆ ತುಂಬಿಸಲು ಕ್ರಮ ಜರುಗಿಸಲಾಗಿದೆ. ಅದರಂತೆ ಕೆಲಸವು ಪ್ರಗತಿಯಲ್ಲಿದೆ. ನೂರಾರು ಎಕರೆ ವಿಸ್ತೀರ್ಣದಲ್ಲಿ ಕೆರೆ ಅಭಿವೃದ್ಧಿಪಡಿಸುವ ಜೊತೆಗೆ ಕೆರೆ ಒಡ್ಡಿಗೆ ಸಿಮೆಂಟ್ ಕಾಂಕ್ರೀಟ್ ಹಾಕಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹಿಸಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಕುಡಿವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ಕೆರೆಯಲ್ಲಿನ ಹೂಳು ತೆಗೆಯಲಾಗುವುದು. ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಆದರ ಸದ್ಯ ಕೆರೆ ತುಂಬಿಸಲು ಪ್ರಥಮಾದ್ಯತೆ ನೀಡಲಾಗುವುದು ಎಂದು ಹೇಳಿದರು. ಕೆರೆ ಕುಡಿಯುವ ನೀರು ಯೋಜನೆಯಿಂದ ಪಟ್ಟಣಕ್ಕೆ ನಿತ್ಯ ನೀರು ಪೂರೈಸಬೇಕು. ಆದರೆ ಕೆರೆಯಲ್ಲಿ ಹೂಳು ತುಂಬಿದ್ದು, ಹೂಳು ತೆರವುಗೊಳಿಸಿದರೆ ಸಮರ್ಪಕ ನೀರು ಪೂರೈಕೆ ಸಾಧ್ಯವಾಗಲಿದೆ. ಲಿಂಗಸುಗೂರು ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಕೆರೆಯಲ್ಲಿ ಹೂಳು ತೆಗೆಸುವಂತೆ ಮಾಜಿ ಶಾಸಕ ಮಾನಪ್ಪ ವಜ್ಜಲ್ ವಿನಂತಿಸಿದರು.
ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಿ.ಎಸ್. ಹೂಲಗೇರಿ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ತಾಲೂಕು ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಕೆ.ಮುತ್ತಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.