11 ಕೇಂದ್ರಗಳಲ್ಲಿ ಪರೀಕ್ಷೆ
Team Udayavani, Jun 26, 2020, 2:55 PM IST
ಜಗಳೂರು: ಪಟ್ಟಣದ ಸರ್ಕಾರಿ ಪ್ರೌಢಶಾಲೆ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾರ್ಥಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಯಾನಿಟೈಸರ್ ನೀಡಿದರು.
ಜಗಳೂರು: ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಿತು. 2321 ವಿದ್ಯಾರ್ಥಿಗಳ ಪೈಕಿ 2188 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ, 133 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
ಕೊರೊನಾ ಹಿನ್ನಲೆಯಲ್ಲಿ ಪರೀಕ್ಷೆಗೆ ಒಂದು ಗಂಟೆ ಮುನ್ನವೇ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೊಳಪಡಿಸಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ಸಾಮಾಜಿಕ ಅಂತರ ಕಾಪಾಡಲು ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಲಾಯಿತು. ಪ್ರತಿ ಬೆಂಚಿಗೆ ಇಬ್ಬರು ವಿದ್ಯಾರ್ಥಿಗಳು ಕೂರಲು ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಕೇಂದ್ರದಲ್ಲಿ 2 ಹೆಚ್ಚುವರಿ ವಿಶೇಷ ಕೊಠಡಿಗಳ ವ್ಯವಸ್ಥೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ ಪಡದೆ ಧೈರ್ಯವಾಗಿ ಪರೀಕ್ಷೆ ಎದುರಿಸಿದ್ದಾರೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿ.ಡಿ. ಹಾಲಪ್ಪ, ಬಿಆರ್ಸಿ ಮಂಜುನಾಥ್, ಸಿಆರ್ಪಿ ನಾಗೇಂದ್ರಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.