ವಿಕಾಸಸೌಧದ ಪೊಲೀಸ್ ಸಿಬ್ಬಂದಿಗೆ ಸೋಂಕು
Team Udayavani, Jun 27, 2020, 6:20 AM IST
ದೇವನಹಳ್ಳಿ: ಪೊಲೀಸ್ ಸಿಬ್ಬಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದ ರಿಂದ ಶಾಂತಿನಗರ ಮತ್ತು ಸುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ. ಬೆಂಗಳೂರಿನ ವಿಕಾಸಸೌಧದ ಪೋಲಿಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ದಿನನಿತ್ಯ ಇಲ್ಲಿಂದಲೇ ಹೋಗಿ ಬರುತ್ತಿದ್ದರು ಎನ್ನಲಾಗಿದೆ.
ಪುರಸಭೆ, ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆ ಸಹಯೋಗದೊಂದಿಗೆ 2ನೇ ವಾರ್ಡ್‌ನ ಅವರ ಸುತ್ತಲಿನ ಪ್ರದೇಶ ಸೀಲ್‌ಡೌನ್ ಮಾಡಲಾಗಿದೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಧರ್ಮೇಂದ್ರ ತಿಳಿಸಿದರು. ಈಗಾಗಲೇ ವ್ಯಕ್ತಿ ರಾಜೀವ್ ಗಾಂಧಿ ಆಸ್ಪತ್ರೆಗೆ ಗುರುವಾರ ರಾತ್ರಿ ಕಳುಹಿಸಲಾಗಿದೆ.
ಅವರ ಕುಟುಂಬಸ್ಥರನ್ನು ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಮಾಡಲಾಗಿದೆ. ಪೋಲಿಸ್ ಸಿಬ್ಬಂದಿ ವ್ಯಕ್ತಿ ಕುಟುಂಬಸ್ಥರನ್ನು ಗಂಟಲುದ್ರವ ಪರೀಕ್ಷೆ ಮಾಡಲಾಗುತ್ತದೆ. ಆಶಾ ಮತ್ತು ಆರೋಗ್ಯ ಕಾರ್ಯಕರ್ತರನ್ನು ನೇಮಿಸಿ, ನೆಗಡಿ, ಕೆಮ್ಮು, ಜ್ವರದ ಲಕ್ಷಣವಿರು ವವರ ಮಾಹಿತಿ ಕಲೆ ಹಾಕುತ್ತಾರೆ.
ನಾಗರಿ ಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಯಂ ಪ್ರೇರಿತರಾಗಿ ಜಾಗರೂಕರಾಗಬೇಕಾ ಗಿದೆ. ಕಂಟೈನ್‌ಮೆಂಟ್ ಜೋನ್ ಅನ್ನಾಗಿ ಘೋಷಿಸಲಾಗಿದೆ. ಈ ಭಾಗದ ಸುತ್ತಲೂ ಸ್ಯಾನಿಟೈಸ್ ಮಾಡಿಸಲಾಗಿದೆ ಎಂದರು. ಪುರ ಸಭೆ ಮುಖ್ಯಾಧಿಕಾರಿ ಎ.ಎಚ್.ನಾಗ ರಾಜ್, ಆರೋಗ್ಯ ಸಹಾಯಕಿ ಪುರಸಭೆ ಆರೋಗ್ಯ ನಿರೀಕ್ಷಕಿ ಸುಲೋಚನಾ ಬಿ.ಜಿ. ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.