ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಕ್ರಮ
Team Udayavani, Jun 27, 2020, 6:24 AM IST
ಚಿಕ್ಕಬಳ್ಳಾಪುರ: ಅಂಗನವಾಡಿಗಳ ಗುಣಮಟ್ಟ ಮೇಲ್ದರ್ಜೆಗೇರಿಸಿ, ಮಕ್ಕಳ ಹಾಜರಾತಿ ಹೆಚ್ಚು ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ನವೀಣ್ಯ ಪೂರ್ಣವಾದ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಅ.ಜೊಲ್ಲೆ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿ, ಇಲಾಖೆಯ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಮೂಲಕ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದರು.
ಲೋಪವಾದರೆ ಕ್ರಮ: ಜಿಲ್ಲೆಯಲ್ಲಿ 1961 ಅಂಗನವಾಡಿಗಳಿಗೆ 4 ಎಂಎಸ್‌ಪಿಸಿಗಳ ಮುಖಾಂತರ ಉತ್ತಮ ಪೌಷ್ಟಿಕ ಆಹಾರ ತಲುಪಿಸಲಾಗುತ್ತಿದ್ದು, ಆಹಾರ ಪೂರೈಕೆಯಲ್ಲಿ ಲೋಪದೋಷಗಳು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪೋಷನ್ ಅಭಿಯಾನ, ಮಾತೃ ಪೂರ್ಣ ಯೋಜನೆ ಸೇರಿದಂತೆ ಮಾತೃ ವಂದನಾ ಯೋಜನೆಗಳ ಮೂಲಕ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ತಲುಪಿಸಬೇಕು ಎಂದರು.
ಆನ್‌ಲೈನ್ ಮಾರುಕಟ್ಟೆ: ಸ್ವಾಧಾರ್ ಗೃಹ ಯೋಜನೆಯಡಿ ಮಹಿಳೆಯರಿಗೆ ನೀಡಲಾ ಗುತ್ತಿರುವ ತರಬೇತಿಗಳನ್ನು ಪ್ರಚಲಿತ, ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಯೋಜ ನೆಗಳ ಬಗ್ಗೆ ತರಬೇತಿ ನೀಡಲು ಕ್ರಮ ವಹಿಸ ಬೇಕು. ಮುಂದಿನ ಹಂತದಲ್ಲಿ ಆನ್‌ಲೈನ್ ಮಾರುಕಟ್ಟೆ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುರೇಖಾ, ಜಿಲ್ಲಾಧಿಕಾರಿ ಆರ್.ಲತಾ, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದಿಟಛಿ ಇಲಾ ಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಉಪವಿಭಾಗಾಧಿಕಾರಿ ರಘುನಂದನ್ ,ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.