ದ.ಕನ್ನಡ: 33 ಮಂದಿಗೆ ಕೋವಿಡ್ ದೃಢ
Team Udayavani, Jun 27, 2020, 7:04 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 33 ಮಂದಿಗೆ ಕೊರೊನಾ ದೃಢಪಟ್ಟಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 517ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 15 ಮಂದಿ ಸೌದಿ ಅರೇಬಿಯಾ, ದಮಾಮ್, ಕತಾರ್‌ನಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದವರು. 10 ಮಂದಿ ಈ ಹಿಂದೆ ಸೋಂಕಿಗೊಳಗಾದ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕ ವುಳ್ಳವರಾಗಿದ್ದು, ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಕೋವಿಡ್ ದೃಢಪಟ್ಟ 62 ವರ್ಷದ ವ್ಯಕ್ತಿಯ
ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ. 53 ವರ್ಷದ ವ್ಯಕ್ತಿ ಅಂತರ್ ಜಿಲ್ಲಾ ಸಂಚಾರ ನಡೆಸಿದ್ದು, ಕೊರೊನಾ ಬಂದಿರುವ ಸಾಧ್ಯತೆ ಇದೆ. ಮಂಗಳೂರಿನ 25 ವರ್ಷದ ಯುವಕ, 51, 30 ವರ್ಷದ ವ್ಯಕ್ತಿ ಹಾಗೂ ಪುತ್ತೂರಿನ 24 ವರ್ಷದ ಯುವಕ ಇನ್‌ಫ್ಲೂಯೆನಾl ಲೈಕ್ ಇಲ್‌ನೆಸ್‌ನಿಂದ ಬಳಲುತ್ತಿದ್ದು, ಕೋವಿಡ್ ದೃಢಪಟ್ಟಿದೆ. ಮಂಗಳೂರಿನ 25 ವರ್ಷದ ಯುವತಿ, 38 ವರ್ಷದ ವ್ಯಕ್ತಿ ತೀವ್ರ ಉಸಿರಾಟದ ಸಮಸ್ಯೆಗೆ ಆಸ್ಪತ್ರೆಗೆ ದಾಖಲಾಗಿದ್ದಾಗ ಕೋವಿಡ್ ದೃಢಪಟ್ಟಿದೆ.
34 ಮಂದಿ ಬಿಡುಗಡೆ; ನಾಲ್ವರು ಐಸಿಯುವಿನಲ್ಲಿ
ಕೋವಿಡ್ ದೃಢಪಟ್ಟು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 34 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶುಕ್ರವಾರ ಬಿಡುಗಡೆಗೊಂಡಿದ್ದಾರೆ. 49 ವರ್ಷದ ವ್ಯಕ್ತಿ ಡಯಾಬಿಟಿಸ್, ನ್ಯುಮೋನಿಯಾದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 57 ವರ್ಷದ ಮಹಿಳೆ ಲಿವರ್ ಕಾಯಿಲೆ, ಡಯಾಬಿಟಿಸ್, ಹೃದಯರೋಗ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದು ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. 59 ವರ್ಷದ ವ್ಯಕ್ತಿ ಹೃದಯರೋಗ, ನ್ಯುಮೋನಿಯಾದಿಂದ ಬಳಲುತ್ತಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 78 ವರ್ಷದ ವೃದ್ಧ ಡಯಾಬಿಟಿಸ್, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
202 ವರದಿ ಬರಲು ಬಾಕಿ
ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ಒಟ್ಟು 303 ಮಂದಿಯ ಗಂಟಲ ದ್ರವ ಮಾದರಿ ಪರೀಕ್ಷಾ ವರದಿಗಳನ್ನು ಸ್ವೀಕರಿಸಲಾಗಿದ್ದು, ಈ ಪೈಕಿ 33 ಪಾಸಿಟಿವ್, 270 ನೆಗೆಟಿವ್ ಆಗಿದೆ. ಒಟ್ಟು 202 ವರದಿ ಬರಲು ಬಾಕಿ ಇದ್ದು, ಹೊಸದಾಗಿ 280 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.