ಠಾಣೆ ಹೊರಗಡೆಯೇ ಕಾರ್ಯ ನಿರ್ವಹಣೆ
Team Udayavani, Jun 27, 2020, 11:30 AM IST
ಹುಬ್ಬಳ್ಳಿ: ಬೆಂಡಿಗೇರಿ ಠಾಣೆ ಆವರಣದಲ್ಲಿ ಹೈಡ್ರೋ ಪ್ಲೋರೈಡ್ ದ್ರಾವಣ ಸಿಂಪರಣೆ ಮಾಡಲಾಯಿತು.
ಹುಬ್ಬಳ್ಳಿ: ಇಲ್ಲಿನ ಬೆಂಡಿಗೇರಿ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದ ಇಬ್ಬರು ಮಹಿಳಾ ಗೃಹರಕ್ಷಕರಿಗೆ (ಹೋಮ್ ಗಾರ್ಡ್) ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಕಟ್ಟಡಕ್ಕೆ ಔಷಧಿ ಸಿಂಪರಣೆ ಹಿನ್ನೆಲೆಯಲ್ಲಿ, ಶುಕ್ರವಾರ ಕಟ್ಟಡದ ಹೊರಗಡೆ ಕಾರ್ಯ ನಿರ್ವಹಣೆ ಮಾಡುವಂತಾಯಿತು.
ಶುಕ್ರವಾರ ಠಾಣೆಗೆ ಸಾರ್ವಜನಿಕರು ಆಗಮಿಸುವುದನ್ನು ನಿರ್ಬಂಧಿಸಲಾಗಿತ್ತು. ಠಾಣೆಯ ಕೆಲಸ-ಕಾರ್ಯಗಳನ್ನು ಆವರಣಕ್ಕೆ ಸ್ಥಳಾಂತರಿಸಿ ಹೊರ ಠಾಣೆಯಾಗಿ ಮಾರ್ಪಡಿಸಲಾಗಿತ್ತು. ಸಿಬ್ಬಂದಿಯು ಠಾಣೆಯ ಹೊರಗಡೆ ಆವರಣದಲ್ಲೇ ಕುಳಿತುಕೊಂಡು ತಮ್ಮ ಕೆಲಸ ಮಾಡುತ್ತಿದ್ದಾರೆ. ಠಾಣೆಯ ಮಹಿಳಾ ಪಿಎಸ್‌ಐ, ಎಎಸ್‌ಐ ಸೇರಿದಂತೆ ಎಲ್ಲಾ ಎಂಟು ಮಹಿಳಾ ಸಿಬ್ಬಂದಿ ಹೋಮ್ ಕ್ವಾರಂಟೈನ್‌ದಲ್ಲಿದ್ದು, ಕೇವಲ ಪುರುಷ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಗುರುವಾರ ಠಾಣೆಯ ಎಲ್ಲಾ 51 ಸಿಬ್ಬಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದ್ದು, ವರದಿಗೆ ಕಾಯುತ್ತಿದ್ದಾರೆ.
ಬೆಂಡಿಗೇರಿ ಠಾಣೆಯ ಮಹಿಳಾ ಸಿಬ್ಬಂದಿ ಕಳೆದ ತಿಂಗಳು ದಾವಣಗೆರೆ ಮೂಲದ ವೃದ್ಧೆಯನ್ನು ಘಂಟಿಕೇರಿಯ ನಿರ್ಗತಿಕ ಕೇಂದ್ರಕ್ಕೆ ಕರೆದೊಯ್ದು ಆಶ್ರಯ ಒದಗಿಸಿದ್ದರು. ಈ ಸಂದರ್ಭದಲ್ಲಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಗೃಹರಕ್ಷಕಿಯರು ವೃದ್ಧೆಗೆ ಸಹಾಯ ಮಾಡಿದ್ದರು. ವೃದ್ಧೆಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಿದ್ದಾಗ ಸೋಂಕು ದೃಢಪಟ್ಟಿತ್ತು. ಹೀಗಾಗಿ ಠಾಣೆಯ ಸಿಬ್ಬಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಿದಾಗ ಪ್ರಾಥಮಿಕ ಸಂಪರ್ಕ ಹೊಂದಿದ್ದ ಗೃಹರಕ್ಷಕಿಯರಲ್ಲೂ ಬುಧವಾರ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಪೂರ್ಣ ಠಾಣೆಯನ್ನು ಸ್ಯಾನಿಟೈಸರ್ ಮಾಡಲಾಯಿತು. ಹು-ಧಾ ಮಹಾನಗರ ಪಾಲಿಕೆಯ ಆರೋಗ್ಯ ಸಿಬ್ಬಂದಿ ಠಾಣೆಯ ಒಳಗಡೆ ಹಾಗೂ ಆವರಣವನ್ನು ಸಂಪೂರ್ಣವಾಗಿ ಹೈಡ್ರೋಪ್ಲೋರೈಡ್ ದ್ರಾವಣದಿಂದ ಸ್ವತ್ಛಗೊಳಿಸಿದರು. ಶನಿವಾರದಿಂದ ಮತ್ತೆ ಠಾಣೆ ಒಳಗಡೆಯಿಂದಲೇ ಕೆಲಸ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.