ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಬಿಎಸ್ ವೈ ಶಂಕು ಸ್ಥಾಪನೆ
Team Udayavani, Jun 27, 2020, 12:00 PM IST
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕೆಂಪೇಗೌಡರು ಚತುರ ಆಡಳಿತಗಾರರಾಗಿದ್ದ ಕೆಂಪೇಗೌಡರಿಗೆ ಬೆಂಗಳೂರನ್ನು ಯೋಜನಾ ಬದ್ಧವಾಗಿ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಶಾಶ್ವತ ನದಿ ಮೂಲಗಳಿಲ್ಲದ ನಗರದಲ್ಲಿ ನೀರಿನ ಸೆಲೆ ಹೆಚ್ಚಿಸಲು ಹಲವು ಕೆರೆಗಳನ್ನು ನಿರ್ಮಿಸಿದ ಖ್ಯಾತಿಯೂ ಅವರಿಗಿದೆ. ಕೆಂಪೇಗೌಡರ ಕೊಡುಗೆ ಸ್ಮರಿಸುತ್ತಲೇ ಹಾಲಿ ನಗರದಲ್ಲಿ ಮೂಲಸೌಕರ್ಯವನ್ನು ಬಲಪಡಿಸಬೇಕಿದೆ. ಜತೆಗೆ ಆರೋಗ್ಯ, ಘನತ್ಯಾಜ್ಯ ಇತರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ. ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣಗೆ ಧನ್ಯವಾದ ಸಲ್ಲಿಸುತ್ತೇನೆ ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಂತಾದವರು ಭಾಗವಹಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.