ಹುತಾತ್ಮ ಯೋಧರಿಗೆ ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ
Team Udayavani, Jun 27, 2020, 11:47 AM IST
ಹುಬ್ಬಳ್ಳಿ: ಭಾರತ ಮತ್ತು ಚೀನಾ ಗಡಿಭಾಗದ ಗಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ ವೀರಯೋಧರಿಗೆ ಕಾಂಗ್ರೆಸ್ ನಾಯಕರು ಕಿಮ್ಸ್ ಮುಂಭಾ ಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.
ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಸಂಘರ್ಷದಲ್ಲಿ ದೇಶದ 20 ಸೈನಿಕರು ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಬಲಿದಾನಕ್ಕೆ ಇಡೀ ರಾಷ್ಟ್ರವೇ ಗೌರವ ಸೂಚಿಸಬೇಕು. ಈ ಘಟನೆಗೆ ಚೀನಾ ನೇರ ಹೊಣೆಯಾಗಿದ್ದು, ದೇಶದ ಜನರು ಚೀನಾ ವಸ್ತುಗಳ ಖರೀದಿ ಹಾಗೂ ಬಳಕೆ ತ್ಯಜಿಸಬೇಕು. ಚೀನಾ ಭಾರತದ ಮಾರುಕಟ್ಟೆಯನ್ನು ಬಹುವಾಗಿ ನೆಚ್ಚಿಕೊಂಡಿದ್ದು, ಚೀನಾ ಉತ್ಪಾದಿತ ವಸ್ತುಗಳನ್ನು ತಿರಸ್ಕರಿಸುವ ಮೂಲಕ ಆ ದೇಶಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಹೇಳಿದರು.
ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಚೀನಾ ವಸ್ತುಗಳನ್ನು ಜನರು ತಿರಸ್ಕರಿಸುವುದು ಒಂದು ಭಾಗವಾದರೆ ಕೇಂದ್ರ ಸರಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ಚೀನಾ ವಸ್ತುಗಳ ಆಮದು ಮೇಲೆ ನಿರ್ಬಂಧ ಹೇರಬೇಕು. ದೇಶದ ಮೇಲೆ ಆಕ್ರಮಣ ಮಾಡುವಂತಹ ದೇಶದ ವಸ್ತುಗಳ ಬಳಕೆ ಅಗತ್ಯವಿಲ್ಲ. ಕೂಡಲೇ ಕೇಂದ್ರ ಸರಕಾರ ಈ ಕುರಿತು ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಅಲ್ತಾಫ್‌ಹುಸೇನ ಹಳ್ಳೂರು, ಎಫ್.ಎಚ್. ಜಕ್ಕಪ್ಪನವರ, ಸದಾನಂದ ಡಂಗನವರ, ಪಾರಸಮಲ್ ಜೈನ್, ಸ್ವಾತಿ ಮಳಗಿ, ಶಾಕೀರ್ ಸನದಿ, ಮೋಹನ ಅಸುಂಡಿ, ಕಿರಣ ಮುಗಬಸವ, ಬಸವರಾಜ ಕಿತ್ತೂರ, ಅಬ್ದುಲ್ ಗನಿ, ಸಾಗರ ಹಿರೇಮನಿ, ಬಂಗಾರೇಶ ಹಿರೇಮಠ, ರಜತ ಉಳ್ಳಾಗಡ್ಡಿಮಠ, ಇಮ್ರಾನ್ ಎಲಿಗಾರ, ಶಿವು ಬೆಂಡಿಗೇರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.