ಹಗೆದಾಳ ಕೆರೆ ಕಾಮಗಾರಿ ವೀಕ್ಷಣೆ
Team Udayavani, Jun 27, 2020, 4:49 PM IST
ಯಮಕನಮರಡಿ: ಕೋವಿಡ್ ಹಿನ್ನೆಲೆಯಲ್ಲಿ ಬಡವರು ಪರದಾಡುವಂತಾಗಿದ್ದು, ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಪಂ ವ್ಯಾಪ್ತಿಗೆ ಬರುವ ಹಗೆದಾಳ ಗ್ರಾಮದ ಗುಡ್ಡ ಪ್ರದೇಶದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಸಾವಿರಾರು ಜನರಿಗೆ ಉದ್ಯೋಗ ನೀಡಿದ ಅಧಿಕಾರಿಗಳ ಕಾರ್ಯವನ್ನು ಶಾಸಕ ಸತೀಶ ಜಾರಕಿಹೊಳಿ ಶ್ಲಾಘಿಸಿದರು.
ಅವರು ಸಮೀಪದ ಹಗೆದಾಳ ಹೊರವಲಯದಲ್ಲಿ ಕೆರೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿ, ಕೆರೆ ನಿರ್ಮಾಣಕ್ಕೆ ಬೇಡಿಕೆ ಹಾಗೂ ನಮ್ಮ ಚಿಂತನೆಯೂ ಇತ್ತು. ಈ ಭಾಗದ ಜನರ ಬಹುದಿನಗಳ ಕನಸು ಈಗ ಸಾಕಾರಗೊಂಡಿದೆ. ಕೆರೆ ನಿರ್ಮಾಣದಿಂದ ಅಂತರ್ಜಲ ಮಟ್ಟ ಹೆಚ್ಚಿ ಜನರು, ರೈತರಿಗೆ ಅನುಕೂಲವಾಗಲಿದೆ ಎಂದರು.ಬಸ್ಸಾಪೂರ ಪಿಡಿಒ ಪ್ರತಿಭಾ ಮುತಾಲಿಕದೇಸಾಯಿ ಮಾತನಾಡಿ, ಸ್ಥಳೀಯವಾಗಿ ಯಾರೇ ನರೇಗಾ ಯೋಜನೆಯಡಿ ಕೆಲಸಕ್ಕೆ, ಜಾಬ್ ಕಾರ್ಡ್‌ಗೆ ಅರ್ಜಿ ಹಾಕಿದರೆ ಅವರಿಗೆ ಕೆಲಸ ನೀಡುತ್ತೇವೆ. ಇಂದು 774 ಜನರು ಕೆರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು. ಜಿಪಂ ಸದಸ್ಯ ಮಂಜುನಾಥ ಪಾಟೀಲ, ಬಸನಾಯಿಕ ನಾಯಿಕ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.