ಕೋವಿಡ್: ಘಟನಾ ಕಮಾಂಡರ್ ನೇಮಕ
Team Udayavani, Jun 27, 2020, 6:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಉದ್ದೇಶದಿಂದ ಸೋಂಕಿತ ಪ್ರದೇಶಗಳನ್ನು ಸರ್ಕಾರದ ನಿರ್ದೇಶನದಂತೆ ನಿಯಂತ್ರಿತ ವಲಯಗಳನ್ನಾಗಿ ಘೋಷಿಸಲಾಗಿದ್ದು, ಪ್ರದೇಶಕ್ಕೆ ಘಟನಾ ಕಮಾಂಡರ್‌ಗಳನ್ನು ನೇಮಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೋಟೆ ಮೂರುಮನೆಹಳ್ಳಿ ಹಾಗೂ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿರುವ ಎಲ್‌ಐಜಿ-2, ಹೌಸಿಂಗ್ ಫೇಸ್-1, ಮನೆ ನಂ: 9ರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿರುವ ಪ್ರದೇಶವನ್ನು ನಿಯಂತ್ರಿತ ವಲಯವನ್ನಾಗಿ ಘೋಷಿಸಲಾಗಿದ್ದು, ಸ್ಥಳಕ್ಕೆ ಘಟನಾ ಕಮಾಂಡರ್‌ರಾಗಿ ಚಿಕ್ಕಮಗಳೂರು ತಾಲೂಕು ತಹಶೀಲ್ದಾರ್ ಕೆ.ಜೆ.ಕಾಂತರಾಜ್ ಅವರನ್ನು (ಮೊ. ಸಂ: 9611002697) ನೇಮಿಸಲಾಗಿದೆ.
ನಿಯಂತ್ರಿತ ವಲಯದ ಸುತ್ತಮುತ್ತಲಿನ 5.ಕಿ.ಮೀ. ವ್ಯಾಪ್ತಿ ಪ್ರದೇಶಗಳನ್ನು ನಿರ್ವಹಿಸಲಿದ್ದು, ಕ್ರಮವಾಗಿ ತಾಲೂಕಿನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹೌಸಿಂಗ್ ಬೋರ್ಡ್‌ನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಕೇಂದ್ರದಿಂದ ಘಟನಾ ನಿಯಂತ್ರಣ ಕೇಂದ್ರದ ಮೇಲ್ವಿಚಾರಣೆ ಮಾಡಲು ತಿಳಿಸಿದೆ.
ಘಟನಾ ಕಮಾಂಡರ್ ಘಟನಾ ನಿಯಂತ್ರಣ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿದ್ದು, ಘಟನಾ ಕೇಂದ್ರದ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ. ಆಹಾರ, ದಿನಸಿ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳು ತಮ್ಮ ವ್ಯಾಪ್ತಿಯಲ್ಲಿನ ಅಂಗಡಿಗಳಲ್ಲಿ ಸಾಕಷ್ಟು ಲಭ್ಯವಿರುವಂತೆ ದೃಢಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.