ಚಾಮರಾಜನಗರ: 13 ಸೋಂಕು ದೃಢ

Team Udayavani, Jun 28, 2020, 5:17 AM IST

chamaraj

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ 13 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಬಹುತೇಕ ಪ್ರಕರಣಗಳು ಬೆಂಗಳೂರಿಗೆ ಪ್ರಯಾಣ ಮಾಡಿ  ಬಂದವರದ್ದಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 33 ಮಂದಿ ಸೋಂಕಿತರಿದ್ದಾರೆ. ಓರ್ವ ಗುಣಮುಖನಾಗಿದ್ದು, 32 ಸಕ್ರಿಯ ಪ್ರಕರಣಗಳಿವೆ.

ಓರ್ವ ರೋಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ  ಬಂದ ಫ‌ಲಿತಾಂಶದಲ್ಲಿ ಗುಂಡ್ಲುಪೇಟೆಯ ಮಹದೇವಪ್ರಸಾದ್‌ ನಗರದ ಚಾಲಕನಿಂದ ಸಂಪರ್ಕಿತರಾದ ಮತ್ತೆ 3 ಜನರು, ಚಾಮರಾಜನಗರ ಪಟ್ಟಣ ಮತ್ತು ತಾಲೂಕು ಸೇರಿ ಒಟ್ಟು 8, ಕೊಳ್ಳೇಗಾಲ ತಾಲೂಕಿನ 2 ಮಂದಿಗೆ ಸೋಂಕು ದೃಢಪಟ್ಟಿದೆ. ಚಾಮರಾಜನಗರ ತಾಲೂಕಿನಲ್ಲಿ ಗುರುತಿಸಿರುವ 4 ಪ್ರಕರಣಗಳ ರೋಗಿಗಳು ಒಂದೇ ಕುಟುಂಬದವರಾಗಿದ್ದು, ಮೂಲತಃ ಯಳಂದೂರು ತಾಲೂಕಿನ ಗೌಡಹಳ್ಳಿಯವರು.

ಆದರೆ ಅವರು ಬಂದಿಗೌಡನಹಳ್ಳಿಯ ಸಂಬಂಧಿಕರ ಮನೆಯಲ್ಲಿದ್ದರಿಂದ ಅವರನ್ನು ಚಾಮರಾಜನಗರ ತಾಲೂಕಿನವರೆಂದು ಪರಿಗಣಿಸಲಾಗಿದೆ. ನಿಗಾವಣೆಯಲ್ಲಿರುವ ಒಟ್ಟು  ಪ್ರಾಥಮಿಕ ಸಂಪರ್ಕಿತರ ಸಂಖ್ಯೆ 186 ಆಗಿದ್ದು, ಶನಿವಾರ 56 ಮಂದಿಯನ್ನು ನಿಗಾವಣೆಯಲ್ಲಿರಿಸಲಾಗಿದೆ. ಒಟ್ಟು 206  ಜನರು ನಿಗಾವಣೆಯಲ್ಲಿರುವ ದ್ವಿತೀಯ ಸಂಪರ್ಕಿತರಾಗಿದ್ದಾರೆ. ಶನಿವಾರ 34 ಜನರನ್ನು ನಿಗಾವಣೆಯಲ್ಲಿರಿಸಲಾಗಿದೆ. ಇದುವರೆಗೆ ಒಟ್ಟಾರೆ 5,158 ಜನರನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 5124  ಪ್ರಕರಣಗಳು ನೆಗೆಟಿವ್‌ ಆಗಿದೆ.

ಲ್ಯಾಬ್‌ ಟೆಕ್ನಿಷಿಯನ್‌ಗೆ ಕೋವಿಡ್‌ 19 ಸೋಂಕು!: ಕೋವಿಡ್‌ 19 ಶಂಕಿತರ ಮಾದರಿಗಳನ್ನು ಟೆಸ್ಟ್‌ ಮಾಡುತ್ತಿದ್ದ ಪ್ರಯೋಗಾಲಯ ತಂತ್ರಜ್ಞರೋರ್ವರಿಗೆ (ಲ್ಯಾಬ್‌ ಟೆಕ್ನಿಷಿಯನ್‌) ಪಾಸಿಟಿವ್‌ ಬಂದಿದೆ. ಅಲ್ಲದೇ, ತಂತ್ರಜ್ಞೆಯ ಪತಿಗೂ  ಸೋಂಕು ತಗುಲಿದೆ. ನಗರದ ಸರ್ಕಾರ ವೈದ್ಯಕೀಯ ಕಾಲೇಜು ಕಟ್ಟಡದಲ್ಲಿ ಕೋವಿಡ್‌ ತಪಾಸಣಾ (ಆರ್‌ಟಿಪಿಸಿಆರ್‌) ಪ್ರಯೋಗಾಲಯವನ್ನು ಕೆಲ ದಿನಗಳ ಹಿಂದಷ್ಟೇ ಆರಂಭಿಸಲಾಗಿದೆ.

ಅಲ್ಲಿ ಶಂಕಿತರ ಗಂಟಲು ದ್ರವದ ಮಾದರಿಯನ್ನು  ಪರೀಕ್ಷೆ ಮಾಡುತ್ತಿದ್ದ 29 ವರ್ಷದ ಪ್ರಯೋಗಾಲಯ ತಂತ್ರಜ್ಞೆಯೋರ್ವರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ, ನಗರದ ಜಿಲ್ಲಾಸ್ಪತ್ರೆಯ ಸಮೀಪದ ಫ್ಯಾನ್ಸಿ ಸ್ಟೋರ್‌ ಹೊಂದಿರುವ ಆಕೆಯ ಪತಿಗೂ (32ವರ್ಷ) ಸೋಂಕು  ತಗುಲಿರುವುದು  ದೃಢಪಟ್ಟಿದೆ.

ಟಾಪ್ ನ್ಯೂಸ್

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.