ದೇಶದ ಅಭಿವೃದ್ಧಿಗೆ ಸ್ವದೇಶಿ ವಸ್ತು ಬಳಸಿ
Team Udayavani, Jun 28, 2020, 5:19 AM IST
ಮಂಡ್ಯ: ಸ್ವದೇಶಿ ವಸ್ತುಗಳ ಬಳಕೆಯಿಂದ ದೇಶದ ಆರ್ಥಿಕತೆ ಬಲಪಡಿಸಬಹುದು ಎಂದು ಆತ್ಮನಿರ್ಭರ ಭಾರತ ಅಭಿಯಾನದ ಪ್ರಮುಖ್ ಸಿ.ಟಿ.ಮಂಜುನಾಥ್ ತಿಳಿಸಿದರು. ಬಿಜೆಪಿ ನಗರ ಘಟಕ, ಆತ್ಮನಿರ್ಭರ ಭಾರತ ವತಿಯಿಂದ ನಗರದ ಹಾಲಹಳ್ಳಿ ಬಡಾವಣೆಯಲ್ಲಿ ನಡೆದ ರಾಷ್ಟ್ರೀಯತೆ, ಸ್ವದೇಶಿ ವಸ್ತುಗಳ ಬಳಕೆ ಕುರಿತ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಚೀನಾ ವಸ್ತುಗಳನ್ನು ಬಹಿಷ್ಕರಿಸಿ ಹಾಗೂ ಸ್ವದೇಶಿ ವಸ್ತುಗಳ ಬಳಸಬೇಕು.
ಜಾಗತೀಕರಣ, ಉದಾರೀಕರಣ, ಖಾಸಗೀಕರಣದಿಂದ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ನಮ್ಮ ದೇಶದ ಜನರು ಖರೀದಿಸುವ ವಿದೇಶಿ ವಸ್ತುಗಳಿಂದ ಆ ದೇಶದ ಆರ್ಥಿಕತೆ ಸಬಲಗೊಳ್ಳುತ್ತದೆ. ಹೀಗೆ ಒಂದು ದೇಶದ ಆರ್ಥಿಕತೆ ಇನ್ನೊಂದು ದೇಶದ ವ್ಯಾಪಾರ ವ್ಯವಸ್ಥೆ ಮೇಲೆ ವಲಂಬಿಸಿರುತ್ತದೆ. ಭಾರತದಲ್ಲಿ ನೆರೆ ರಾಷ್ಟ್ರೀಯ ವಸ್ತುಗಳು ಲಗ್ಗೆ ಇಟ್ಟಿದ್ದು, ಚೀನಾದ ವಸ್ತುಗಳ ಹಾವಳಿ ಹೆಚ್ಚಾಗಿದೆ.
ಹೀಗಾಗಿ ನಮ್ಮ ದೇಶದ ವಸ್ತುಗಳಿಗೆ ಬೇಡಿಕೆ ಕಡಿಮೆಯಾಗುತ್ತಿದ್ದು, ಚೀನಾ, ಭಾರತಕ್ಕಿಂತ ಆರ್ಥಿಕವಾಗಿ ಸಬಲಗೊಳ್ಳುತ್ತಿದೆ ಎಂದು ತಿಳಿಸಿದರು. ಸ್ವದೇಶಿ ವಸ್ತುಗಳ ಬೇಡಿಕೆ ಕಡಿಮೆ ಹಿನ್ನೆಲೆಯಲ್ಲಿ ದೇಶಿ ಕುಶಲ ವಸ್ತುಗಳ ತಯಾರಿಕಾ ಘಟಕಗಳು ಮುಚ್ಚಿವೆ. ಇದನ್ನು ಅವಲಂಬಿಸಿರುವ ಲಕ್ಷಾಂತರ ಜನರು ಉದ್ಯೊಗ ಕಳೆದುಕೊಳ್ಳುತ್ತಿದ್ದು, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಇದೇ ಪರಿಸ್ಥಿತಿ ಮುಂದುವರಿದರೆ ದೇಶದಲ್ಲಿರುವ ಎಲ್ಲ ಗುಡಿ ಕೈಗಾರಿಕೆಗಳ ನಶಿಸುವಿಕೆ ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದರು. ಬಿಜೆಪಿ ನಗರಾಧ್ಯಕ್ಷ ಬಿ.ವಿವೇಕ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ರಮೇಶ್ ವಿಶ್ವಕರ್ಮ, ಎಸ್‌ಸಿ ಮೋರ್ಚಾ ಅಧ್ಯಕ್ಷ ನಿತ್ಯಾನಂದ, ಮುಖಂಡರಾದ ಸಿದ್ದರಾಜುಗೌಡ, ಮಾದರಾಜ ಅರಸ್, ನಾಗಣ್ಣ ಮಲ್ಲಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.