ಸರಳವಾಗಿ ಕೆಂಪೇಗೌಡ ಜಯಂತಿ ಆಚರಣೆ
Team Udayavani, Jun 28, 2020, 6:57 AM IST
ಸಕಲೇಶಪುರ: ನಾಡು ಕಟ್ಟುವಲ್ಲಿ ಕೆಂಪೇಗೌಡರ ಪಾತ್ರ ಪ್ರಮುಖ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದಿಂದ ನಡೆದ ಸರಳವಾಗಿ ನಡೆದ ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಯಿಂದ ಬೆಂಗಳೂರು ನಗರ ನಿರ್ಮಾಣವಾಯಿತು.
ಬೆಂಗಳೂರಿನ ಹಲವು ಕೆರೆ ಗಳನ್ನೂ ಅವರು ಅಭಿವೃದಿಟಛಿಗೊಳಿಸಿ ಮಾದರಿಯಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾಧಿ ಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್, ಇಒ ಹರೀಶ್ ಮೊದಲಾದವರು ಉಪಸ್ಥಿತರಿದ್ದರು. ಪಟ್ಟಣದ ಒಕ್ಕಲಿಗರ ಭವನದಲ್ಲಿ ತಾಲೂಕು ಒಕ್ಕಲಿಗ ಸಮಾಜದಿಂದ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಮಾತನಾಡಿ, ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಕೆಂಪೇಗೌಡ ಜಯಂತಿಯನ್ನು ಸರಳ ವಾಗಿ ಆಚರಿಸಲಾಗುತ್ತಿದೆ ಎಂದರು.
ಲಡಾಖ್‌ನಲ್ಲಿ ಚೈನಾ ಜೊತೆಗೆ ಇತ್ತೀಚೆಗೆ ನಡೆದ ಹೋರಾಟದಲ್ಲಿ ಮೃತ ಸೈನಿಕರಿಗೆ ಹಾಗೂ ಇತ್ತೀಚೆಗೆ ಮೃತಪಟ್ಟ ಒಕ್ಕಲಿಗ ಮುಖಂಡ ಮಲ್ಲೇಶ್ ಗೌಡ ಅವರಿಗೆ ಸಂಘದ ವತಿಯಿಂದ ಶ್ರದ್ದಾಂಜಲಿ ಅರ್ಪಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಶ್ವೇತಾ ಪ್ರಸನ್ನ , ಸಕಲೇಶ್ವರಿ ಒಕ್ಕಲಿಗ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಶೋಭಾ, ಎಪಿಎಂಸಿ ಅಧ್ಯಕ್ಷ ಕವನ್, ಪುರಸಭಾ ಸದಸ್ಯರಾದ ಆದರ್ಶ, ಪ್ರಜ್ವಲ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.