ಬೀದರ: 1760 ಪರೀಕ್ಷಾರ್ಥಿಗಳು ಗೈರು
Team Udayavani, Jun 28, 2020, 8:44 AM IST
ಬೀದರ: ಜಿಲ್ಲೆಯಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿಗಣಿತ ಪರೀಕ್ಷೆಗೆ ಹೆಸರು ನೋಂದಾಯಿಸಿದ ಒಟ್ಟು 26,181 ವಿದ್ಯಾರ್ಥಿಗಳ ಪೈಕಿ 24,421 ವಿದ್ಯಾರ್ಥಿಗಳು ಹಾಜರಾಗಿದ್ದು, 1760 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಾಜರಾದ ವಿದ್ಯಾರ್ಥಿಗಳಲ್ಲಿ ನೆರೆ ರಾಜ್ಯದ 16 ಮತ್ತು ವಲಸೆ ವಿದ್ಯಾರ್ಥಿಗಳು 339 ಸೇರಿದ್ದಾರೆ. ಕಂಟೈನ್ಮೆಂಟ್ ಪ್ರದೇಶದ 16 ಮಕ್ಕಳು ಪರೀಕ್ಷೆ ಬರೆದಿದ್ದಾರೆ.
ಅನಾರೋಗ್ಯ ಕಾರಣದಿಂದ ಓರ್ವ ಪರೀಕ್ಷಾರ್ಥಿಗೆ ವಿಶೇಷ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿಡಿಪಿಐ ತಿಳಿಸಿದ್ದಾರೆ. ಸಚಿವ, ಸಂಸದರು ಭೇಟಿ: ನಗರದ ಗುರುನಾನಕ್ ಪ್ರೌಢಶಾಲಾ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ ಮತ್ತು ಎಂಎಲ್ಸಿ ರಘುನಾಥ ಮಲ್ಕಾಪುರೆ ಭೇಟಿ ನೀಡಿ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿದರು. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಕೈಗೊಂಡ ಸುರಕ್ಷತಾ ಕ್ರಮಗಳ ಬಗ್ಗೆ ಮುಖ್ಯಗುರುಗಳಿಂದ ಮಾಹಿತಿ ಪಡೆದರು. ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು.
ಡಿಸಿ ಭೇಟಿ: ಡಿಸಿ ರಾಮಚಂದ್ರನ್ ಆರ್. ಅವರು ಜನವಾಡ ಹತ್ತಿರದ ರಾಷ್ಟ್ರೀಯ ಮಾಧ್ಯಮ ಶಿಕ್ಷಣ ಅಭಿಯಾನದ ಸರ್ಕಾರಿ ಆದರ್ಶ ವಿದ್ಯಾಲಯದ ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.