ರಾಯಚೂರು: 6 ಜನರಿಗೆ ಸೋಂಕು
Team Udayavani, Jun 28, 2020, 9:24 AM IST
ರಾಯಚೂರು: ಜಿಲ್ಲೆಯಲ್ಲಿ ಶನಿವಾರ ಮತ್ತೆ 6 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಿಂದ 415 ಶಂಕಿತರ ಗಂಟಲಿನ ದ್ರವ ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ದೇವದುರ್ಗ ತಾಲೂಕಿನಿಂದ 109, ಲಿಂಗಸುಗೂರು ತಾಲೂಕಿನಿಂದ 89,ಮಾನ್ವಿ ತಾಲೂಕಿನಿಂದ 56, ಸಿಂಧನೂರು ತಾಲೂಕಿನಿಂದ 99 ಮತ್ತು ರಾಯಚೂರು ತಾಲೂಕಿನಿಂದ 62 ಮಾದರಿಗಳನ್ನು ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ ವರದಿಗಳಲ್ಲಿ 172 ನೆಗೆಟಿವ್ ಆಗಿವೆ.
ಈವರೆಗೆ 22,131 ಜನರ ಗಂಟಲು ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಿದ್ದು, 20,098 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,564 ಸ್ಯಾಂಪಲ್ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್ಗಳಲ್ಲಿಂದು 513 ಜನರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. ಈವರೆಗೆ 463 ಪಾಸಿಟಿವ್ ಪ್ರಕರಣ ಗಳು ವರದಿಯಾಗಿವೆ. 399 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್ಗಳಲ್ಲಿ 175 ಜನರನ್ನು ಇರಿಸಿ ನಿಗಾವಹಿಸಲಾಗಿದೆ. ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.