ಜಿಂದಾಲ್ ಕಾರ್ಖಾನೆ ಲಾಕ್‌ಡೌನ್‌ಗೂ ಹಿಂಜರಿಯಲ್ಲ
Team Udayavani, Jun 28, 2020, 9:39 AM IST
ಬಳ್ಳಾರಿ: ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದರೆ ಜಿಂದಾಲ್ ಕಾರ್ಖಾನೆ ಲಾಕ್‌ಡೌನ್‌ಗೂ ಹಿಂಜರಿಯುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಜನರ ಪ್ರಾಣ ಮುಖ್ಯ. ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಮೂರನೇ ಹಂತ ತಲುಪಿಲ್ಲ: ಕೋವಿಡ್ ಸೋಂಕು ರಾಜ್ಯದಲ್ಲಿ ಮೂರನೇ ಹಂತ ತಲುಪಿಲ್ಲ. ಇನ್ನೂ 2ನೇ ಹಂತದಲ್ಲಿದೆ. ಕಾರಣ ಇದಕ್ಕಾಗಿ 10 ರೀತಿಯ ತಂಡಗಳನ್ನು ರಚಿಸಿಕೊಂಡು ಟೆಸ್ಟ್ ಮಾಡಲಾಗುತ್ತಿದೆ. ಈ ವರದಿಯಲ್ಲಿ ಸಮುದಾಯಕ್ಕೆ ವೈರಸ್ ಹರಡಿಲ್ಲ ಎಂದು ನಮಗೆ ತಿಳಿದು ಬಂದಿದೆ. ಕೆಲವೊಂದು ಕಡೆ ಸೋಂಕು ಹೇಗೆ ಬಂತು ಎಂದು ಪತ್ತೆ ಹಚ್ಚಲಾಗುತ್ತಿದೆ. ಇನ್ನು ಕೆಲವು ಕಡೆ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ. ಇದಕ್ಕೆ ಜನರು ಸಹಕರಿಸಬೇಕು. ಎ ಸಿಸ್ಟಮ್ಯಾಟಿಕ್ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಅಂತಹ ಸೋಂಕಿತರನ್ನು ಕೆಲವೊಂದು ಶಾದಿಮಹಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಅವರನ್ನು ಚೆಕ್ ಮಾಡಿದಾಗ ಪಾಸಿಟಿವ್ ಬಂದರೆ ಕೂಡಲೇ ಚಿಕಿತ್ಸೆ ಕೊಡಲಾಗುತ್ತಿದೆ. ಅಲ್ಲದೇ, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆಯನ್ನೂ ನಡೆಸಲಾಗಿದ್ದು, ಹಲವರು ಹಲವು ಸಲಹೆಗಳನ್ನು ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಆತಂಕದ ನಡುವೆಯೂ ವಿದ್ಯಾರ್ಥಿಗಳು ಧೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸೋಂಕು ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೆಲವೊಂದು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಬರೆಯುತ್ತಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್
ICC ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್ ಬುಮ್ರಾ ಹೆಸರು
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.