ಪ್ರತಿಷ್ಠಾನದ ಹಣ ಕಲ್ಯಾಣ ಯೋಜನೆಗಳಿಗೆ ಬಳಕೆ: ಬಿಜೆಪಿ ಟೀಕೆಗೆ ಕಾಂಗ್ರೆಸ್‌ನಿಂದ ಸ್ಪಷ್ಟನೆ

Team Udayavani, Jun 28, 2020, 10:27 AM IST

ಪ್ರತಿಷ್ಠಾನದ ಹಣ ಕಲ್ಯಾಣ ಯೋಜನೆಗಳಿಗೆ ಬಳಕೆ: ಬಿಜೆಪಿ ಟೀಕೆಗೆ ಕಾಂಗ್ರೆಸ್‌ನಿಂದ ಸ್ಪಷ್ಟನೆ

ಹೊಸದಿಲ್ಲಿ: 2005-06ರಲ್ಲಿ ರಾಜೀವ್‌ಗಾಂಧಿ ಪ್ರತಿಷ್ಠಾನಕ್ಕೆ (ಆರ್‌ಜಿಎಫ್) ಚೀನದ ರಾಯಭಾರ ಕಚೇರಿಯಿಂದ ದೇಣಿಗೆ ಸ್ವೀಕರಿಸ­ಲಾಗಿದೆ ಎಂಬುದನ್ನು ಕಾಂಗ್ರೆಸ್‌ ಒಪ್ಪಿ­ಕೊಂ ಡಿದೆ. ಅಲ್ಲದೆ, ಈ ಹಣವನ್ನು ಕಲ್ಯಾಣ ಯೋ ಜನೆ­ಗಳಿಗೆ ಬಳಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಈ ದೇಣಿಗೆ ಸ್ವೀಕರಿಸಲಾಗಿದೆ ಎಂಬ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆರೋಪವನ್ನು ಅದು ಸಾರಾಸಗಟಾಗಿ ತಳ್ಳಿಹಾಕಿದೆ.

ಕಾಂಗ್ರೆಸ್‌ ವಕ್ತಾರ ರಂದೀಪ್‌ ಸಿಂಗ್‌ ಸುರ್ಜೆ­­ವಾಲಾ ಅವರು ಈ ಸಂಬಂಧ ಪ್ರಕಟಣೆ­ಯೊಂದನ್ನು ನೀಡಿದ್ದು, ಚೀನದ ರಾಯಭಾರ ಕಚೇರಿಯಿಂದ ಪ್ರತಿಷ್ಠಾನಕ್ಕೆ ನೀಡಲಾದ 1.45 ಕೋಟಿ ರೂ.ಗಳ ದೇಣಿಗೆಯನ್ನು ದಿವ್ಯಾಂಗರ ಕಲ್ಯಾಣಕ್ಕಾಗಿ ಮತ್ತು ಭಾರತ-ಚೀನ ಸಂಬಂಧ­ಗಳ ಸಂಶೋಧನಾ ಅಧ್ಯಯನಕ್ಕಾಗಿ ಬಳಸಲಾ­ಗಿದೆ. ಇನ್ನು, ಪ್ರತಿಷ್ಠಾನಕ್ಕೆ ಪ್ರಧಾನ­ಮಂತ್ರಿ ಪರಿ­ಹಾರ ನಿಧಿಯಿಂದ ನೀಡಲಾಗಿ­ರುವ 20 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ಅನುದಾನವನ್ನು ಸುನಾಮಿ ಸಂತ್ರಸ್ತರ ಪರಿಹಾರ ಕಾರ್ಯಗಳಿ­ಗಾಗಿ ಬಳಸಲಾಗಿದೆ ಎಂದು ತಿಳಿಸಿದ್ದಾರೆ.

ಹಣ ಸ್ವೀಕರಿಸಿದ್ದನ್ನು ದಾಖಲೆಗಳಲ್ಲಿ ತೋರಿ­ಸ­ಲಾಗಿದೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ ವಿಚಾರದಲ್ಲಿ ಪ್ರತಿಷ್ಠಾನ, ಹಣದ ಲೆಕ್ಕಪತ್ರ­ಗಳನ್ನು ಸರಿಯಾಗಿ ತೋರಿಸಿದೆ. ಎಲ್ಲವೂ ಕಾನೂನುಬದ್ಧವಾಗಿಯೇ ಇವೆ. ಇದರಲ್ಲಿ ಯಾವುದೇ ರಹಸ್ಯಗಳಿಲ್ಲ ಎಂದು ಅವರು ತಿಳಿಸಿದ್ದಾರೆ. ಚೀನ ಆಕ್ರಮಣದಿಂದ ದೇಶದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಬಿಜೆಪಿ ಇಂತಹ ಆರೋಪ ಮಾಡುತ್ತಿದೆ ಎಂದಿದ್ದಾರೆ.

ನಡ್ಡಾ ಮಾತು ಅರ್ಧ ಸತ್ಯ: ಚಿದಂಬರಂ
ಇದೇ ವೇಳೆ, ಬಿಜೆಪಿ ಅಧ್ಯಕ್ಷರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ, ನಡ್ಡಾ ಅವರ ಆರೋಪದಲ್ಲಿ ಅರ್ಧ ಸತ್ಯವಿದೆ. ಯಾವುದೇ ಪ್ರತಿಷ್ಠಾನ, ಚಿಂತಕರ ವೇದಿಕೆಗಳು ದೇಣಿಗೆ ಹಣದಿಂದಲೇ ನಡೆಯುತ್ತವೆ ಎಂಬುದು ಸಾಮಾನ್ಯ ಸಂಗತಿ. ರಾಜೀವ್‌ಗಾಂಧಿ ಪ್ರತಿಷ್ಠಾನದ ದೇಣಿಗೆ ವಿಚಾರದಲ್ಲಿ ಎಲ್ಲವೂ ಕಾನೂನುಬದ್ಧವಾಗಿಯೇ ಇವೆ ಎಂದು ತಿರುಗೇಟು ನೀಡಿದ್ದಾರೆ. ಒಂದು ವೇಳೆ, ಚೀನದಿಂದ ಪಡೆದ ದೇಣಿಗೆಯನ್ನು ಪ್ರತಿಷ್ಠಾನ ಹಿಂತಿರುಗಿಸಿದರೆ, ಚೀನ ತನ್ನ ಸೇನೆಯನ್ನು ಲಡಾಖ್‌ ಗಡಿಭಾಗದಿಂದ ಹಿಂತೆಗೆದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿಯವರು ದೇಶಕ್ಕೆ ಭರವಸೆ ನೀಡಬಹುದೇ ಎಂದು ಅವರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.