ಗಣಿತ ಪರೀಕ್ಷೆಗೆ1798 ಮಕ್ಕಳು ಗೈರು
Team Udayavani, Jun 28, 2020, 12:39 PM IST
ಸಾಂದರ್ಭಿಕ ಚಿತ್ರ
ಚಿಕ್ಕೋಡಿ: ಕೋವಿಡ್ ಮಧ್ಯೆ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಎರಡನೆ ಪತ್ರಿಕೆ ಗಣಿತ ವಿಷಯದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 1798 ಮಕ್ಕಳು ಗೈರಾಗಿದ್ದಾರೆ.
ಕಳೆದ 25 ರಿಂದ ರಾಜ್ಯಾದ್ಯಂತ ಆರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಎರಡು ಪತ್ರಿಕೆಗಳು ಸುಗಮವಾಗಿಜರುಗಿದ್ದು, ಆದರೆ ಮಕ್ಕಳ ಗೈರು ಎದ್ದು ಕಾಣುತ್ತಿದೆ. ಚಿಕ್ಕೋಡಿ ಶೆ„ಕ್ಷಣಿಕ ಜಿಲ್ಲೆ ವ್ಯಾಪ್ತಿಯ 40,909 ಮಕ್ಕಳ ಪೈಕಿ 39,111 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದ 1798 ಮಕ್ಕಳು ಗೈರಾಗಿದ್ದಾರೆ. ಗಣಿತ ವಿಷಯದಲ್ಲಿ ಯಾವುದೇ ವಿದ್ಯಾರ್ಥಿ ನಕಲು ಮಾಡಿ ಡಿಬಾರ್ ಆದ ವರದಿಯಿಲ್ಲ.
ಚಿಕ್ಕೋಡಿ ಶೆ„ಕ್ಷಣಿಕ ಜಿಲ್ಲೆ ವ್ಯಾಪ್ತಿಯ ಅಥಣಿ ವಲಯದಲ್ಲಿ 166 ಮಕ್ಕಳು ಗೈರಾಗಿದ್ದಾರೆ. ಕಾಗವಾಡ ವಲಯದಲ್ಲಿ 49, ಚಿಕ್ಕೋಡಿ ವಲಯದಲ್ಲಿ 391, ನಿಪ್ಪಾಣಿ-129, ಗೋಕಾಕ-116, ಮೂಡಲಗಿ-253, ಹುಕ್ಕೇರಿ-196, ರಾಯಬಾಗ-498 ಮಕ್ಕಳು ಗೈರಾಗಿದ್ದಾರೆ. ಗಡಿ ಭಾಗದಲ್ಲಿ ಕೋವಿಡ್ ತಾಂಡವವಾಡುತ್ತಿರುವುದರಿಂದ ಮಕ್ಕಳಿಗೆ ಸಾಮಾಜಿಕ ಅಂತರದ ವ್ಯವಸ್ಥೆ ಮಾಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್, ಥರ್ಮಲ ಸ್ಕ್ರೀನಿಂಗ್ ಮುಂತಾದ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಕ್ಕಳು ಹಾಗೂ ಪಾಲಕರಲ್ಲಿರುವ ಭಯವನ್ನು ಶಿಕ್ಷಣ ಇಲಾಖೆ ದೂರ ಮಾಡಿದೆ. ಹೀಗಾಗಿ ಮಕ್ಕಳು ಆತ್ಮವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.