ಮಳೆ ಆರಂಭದ ಹೊತ್ತಲ್ಲೆ ಮನೆ ನಿರ್ಮಾಣಕ್ಕೆ ಆದೇಶ!

9 ಕೊರಗ ಸಮುದಾಯ ತ್ರಿಶಂಕು ಸ್ಥಿತಿಯಲ್ಲಿ

Team Udayavani, Jun 29, 2020, 5:47 AM IST

ಮಳೆ ಆರಂಭದ ಹೊತ್ತಲ್ಲೆ ಮನೆ ನಿರ್ಮಾಣಕ್ಕೆ ಆದೇಶ!

ಬೆಳ್ತಂಗಡಿ: ಉಜಿರೆ ಗ್ರಾಮದ ಬಡಕೊಟ್ಟು ಎಂಬಲ್ಲಿರುವ 9 ಕೊರಗ ಕುಟುಂಬಗಳಿಗೆ ತಲಾ 3.50 ಲ.ರೂ. ಘಟಕ ವೆಚ್ಚದಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯಡಿ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದರೂ, ಆದೇಶ ಕೈಸೇರಿದ 15 ದಿನಗಳೊಳಗಾಗಿ ಕಾಮಗಾರಿ ಆರಂಭಿಸಿ, 6 ತಿಂಗಳೊಳಗೆ ಪೂರ್ಣ ಗೊಳಿಸಬೇಕೆಂಬ ಆದೇಶದಿಂದ ತ್ರಿಶಂಕು ಸ್ಥಿತಿ ಎದುರಾಗಿದೆ.

ಸಕಾಲದಲ್ಲಿ ಕಾಮಗಾರಿ ಆರಂಭವಾಗದೆ ಇದ್ದರೆ ಮಂಜೂರಾತಿಯನ್ನು ರದ್ದುಪಡಿಸುವ ಮತ್ತು 6 ತಿಂಗಳೊಳಗೆ ಮನೆ ಪೂರ್ತಿಯಾಗದಿದ್ದರೆ ಅನು ದಾನವನ್ನು ಹಿಂಪಡೆಯುವ ಹಕ್ಕು ಇಲಾಖೆಗಿದೆ. ಫೆಬ್ರವರಿಯಲ್ಲಿ ಕೈ ಸೇರಬೇಕಿದ್ದ ಆದೇಶ ಜೂನ್‌ ತಿಂಗಳಲ್ಲಿ ಬಂದಿರುವುದೇ ಈ ಸಮಸ್ಯೆಗೆ ಕಾರಣ. ಈಗಿರುವ ಮನೆಯನ್ನು ಕೆಡವಿದರೆ ಹೊಸ ಮನೆ ಆಗುವವರೆಗೆ ತಾವು ವಾಸಿಸುವುದೆಲ್ಲಿ ಎಂಬ ಪ್ರಶ್ನೆ ಈ ಕುಟುಂಬದವರದ್ದಾಗಿದೆ.

ಮೂರು ಬಾರಿ ಮನೆ ನಿರ್ಮಾಣ
ಸುಮಾರು 20 ವರ್ಷಗಳಿಂದ ಈ ಕುಟುಂಬಗಳಿಗೆ ಇಲಾಖೆಗಳು ಮೂರು ಬಾರಿ ಮನೆ ನಿರ್ಮಿಸಿ ಕೊಟ್ಟಿದ್ದರೂ ಗುಣಮಟ್ಟದ ಕೊರತೆಯಿಂದಾಗಿ ಹೆಚ್ಚು ಕಾಲ ಉಳಿಯಲಿಲ್ಲ. ಮೊದಲ ಬಾರಿ ಹಂಚಿನ ಮನೆಗಳನ್ನು ಇಲಾಖೆ ನಿರ್ಮಿಸಿ ಕೊಟ್ಟಿತ್ತು. ಬಳಿಕ ಐಟಿಡಿಪಿ ಇಲಾಖೆಯಿಂದ ಕಾಂಕ್ರೀಟ್‌ ಮನೆ ನಿರ್ಮಿಸಿ ಕೊಟ್ಟಿತ್ತು. ನಿರ್ಮಿತಿ ಕೇಂದ್ರದವರು ನಿರ್ಮಿಸಿದ್ದ ಈ ಮನೆಗಳು ಗಾಳಿ, ಬೆಳಕಿನ ವ್ಯವಸ್ಥೆ ಇಲ್ಲದೆ ಗೂಡಿನಂತಿದ್ದವು. ಅದರೊಳಗೆ ಇರಲಾಗದೆ ಮನೆಮಂದಿ ಅಂಗಳದಲ್ಲಿ ಟರ್ಪಾಲು ಚಪ್ಪರ ಹಾಕಿ ದಿನದೂಡುತ್ತಿದ್ದರು.

ಈಗ ಇವರು ವಾಸಿಸುತ್ತಿರುವ ಮನೆಗಳು ನಿರ್ಮಾಣವಾಗಿ ಕೇವಲ ಒಂದು ದಶಕ ಕಳೆದಿದೆ. ಈಗಲೇ ಅವು ಕುಸಿದು ಬೀಳುವ ಸ್ಥಿತಿಗೆ ತಲುಪಿವೆ. ಆದ್ದರಿಂದ ಸಮಾಜ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಿ ಹೊಸ ಮನೆಗಳನ್ನು ನಿರ್ಮಿಸಿಕೊಡುವಂತೆ ಕೇಳಿಕೊಳ್ಳಲಾಗಿತ್ತು.

ನಿರ್ಲಕ್ಷ್ಯದಿಂದ ಆದೇಶ ತಡ
ಇದರಂತೆ ಲೋಕೋಪಯೋಗಿ ಇಲಾಖೆ ಪರಿಶೀಲಿಸಿ 2020ರ ಜನವರಿ ಮೊದಲ ವಾರದಲ್ಲಿ ವರದಿ ನೀಡಿತ್ತು. ಆದರೆ ಸಮಗ್ರ ಗಿರಿಜನಾಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆದೇಶ ತಡವಾಗಿದೆ. ಈ ನಿಟ್ಟಿನಲ್ಲಿ ವರದಿಯನ್ನು ಪರಿಷ್ಕರಿಸಿ ನವೆಂಬರ್‌ ಬಳಿಕ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಅಥವಾ ತಾತ್ಕಾಲಿಕ ವಸತಿಗೆ ವ್ಯವಸ್ಥೆ ಮಾಡಬೇಕು ಎಂಬ ಆಗ್ರಹ ಕುಟುಂಬದವರಿಂದ ಕೇಳಿ ಬರುತ್ತಿದೆ.

ಅಧಿಕಾರಿಗಳ ಬಳಿ ಚರ್ಚೆ
ನಾನು ರಜೆಯಲ್ಲಿದ್ದು 15 ದಿನಗಳ ಹಿಂದೆ ಕಚೇರಿಗೆ ಹಾಜರಾಗಿದ್ದೇನೆ. ಆದೇಶ ತಲುಪಿದ್ದಲ್ಲಿ ಮನೆ ನಿರ್ಮಿಸಬೇಕಿದೆ. ಹೊಸ ಮನೆ ನಿರ್ಮಾಣಕ್ಕೆ ಬೇರೆಡೆ ಸ್ಥಳಾವಕಾಶ ಇರುವ ಅಥವಾ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವ ಕುರಿತು ತಾಲೂಕು ಸಂಬಂಧಪಟ್ಟ ಅಧಿಕಾರಿಗಳ ಬಳಿ ಚರ್ಚಿಸುತ್ತೇನೆ.
-ಹೇಮಲತಾ, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ, ಮಂಗಳೂರು

ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ
ಮನೆ ನಿರ್ಮಾಣಕ್ಕೆ ತಲಾ ಒಂದು ಲಕ್ಷದಂತೆ ತನ್ನ ಸ್ವಂತ ಅನುದಾನ ಒದಗಿ ಸುವುದಾಗಿ ಶಾಸಕರು ಭರವಸೆ ನೀಡಿ ದ್ದಾರೆ. ಶಾಸಕರ ಬಳಿ ಚರ್ಚಿಸಿ ಶೀಘ್ರದಲ್ಲೇ ಮನೆ ನಿರ್ಮಾಣ ಹಾಗೂ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚರ್ಚಿಸಲಾಗುವುದು.
-ಹೇಮಚಂದ್ರ, ಪ್ರಭಾರ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ

ಟಾಪ್ ನ್ಯೂಸ್

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.