ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಗುರಿ
Team Udayavani, Jun 29, 2020, 6:18 AM IST
ಮಂಡ್ಯ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ. ಹೀಗಾಗಿ ಪಕ್ಷ ಸಂಘಟನೆಗೆ ಆದ್ಯತೆ ನೀಡಿದ್ದೇವೆ ಎಂದು ಸೋನಿಯಾ ಗಾಂಧಿ ಬ್ರಿಗೇಡ್ ಕರ್ನಾಟಕ ರಾಜ್ಯಾಧ್ಯಕ್ಷೆ ಗೀತಾ ಕದರ ಮಂಡಲಗಿ ತಿಳಿಸಿದರು. ನಗರದಲ್ಲಿ ಸೋನಿಯಾಗಾಂಧಿ ಬ್ರಿಗೇಡ್‌ನ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಬಿಜೆಪಿಯಲ್ಲಿ ಆರ್‌ಎಸ್‌ಎಸ್, ಭಜರಂಗದಳ ಯಾವ ರೀತಿ ಕೆಲಸ ಮಾಡುತ್ತೋ ಅದೇ ಮಾದರಿಯಲ್ಲಿ ನಮ್ಮ ಬ್ರಿಗೇಡ್ ಕಾಂಗ್ರೆಸ್ ಪಕ್ಷಕ್ಕೆ ಒತ್ತಾಸೆಯಾಗಿ ಕೆಲಸ ಮಾಡುತ್ತದೆ. ಈಗಾಗಲೇ ರಾಜ್ಯಾದ್ಯಂತ ಸಂಘಟನೆಯಲ್ಲಿ ತೊಡಗಿ ದ್ದೇವೆ. ಜಿಲ್ಲಾ ಸಮಿತಿಗಳನ್ನೂ ರಚಿಸಿದ್ದೇವೆ. ಮಂಡ್ಯ ಜಿಲ್ಲಾ ಅಧ್ಯಕ್ಷರಾಗಿ ವೀಣಾ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.
ವೀಡಿಯೋ ಪ್ರದರ್ಶನಕ್ಕೆ ಅವಕಾಶ: ಡಿ.ಕೆ.ಶಿವ ಕುಮಾರ್ ಅವರ ಪದಗ್ರಹಣ ಸಮಾರಂಭ ಜು.2 ರಂದು ನಡೆಯಲಿದ್ದು, ಈ ಕಾರ್ಯಕ್ರಮವನ್ನು ವೀಕ್ಷಿಸಲು ಮಂಡ್ಯದ ಈಶ್ವರ ದೇವಾಲಯದಲ್ಲಿ ವಿಡಿಯೋ ಪ್ರದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಈ ಸಮಾರಂಭದಲ್ಲಿ ನಮ್ಮ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ನಿಯಮ ಪಾಲಿಸಿ: ಕೋವಿಡ್ 19 ಕಾರಣದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆಯೇ ಅವೆಲ್ಲವನ್ನೂ ಪಾಲಿಸಲಾಗುವುದು. ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಆಗಮಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು. ಸಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈಶ್ವರ ದೇವಾಲಯ ಪ್ರವೇಶಿ ಸುವ ಮುನ್ನ ಸ್ಯಾನಿಟೈಸರ್ ಬಳಸುವಂತೆ ಸೂಚಿಸಲಾ ಗಿದೆ ಎಂದು ತಿಳಿಸಿದರು.
ಬ್ರಿಗೇಡ್‌ನ ಜಿಲ್ಲಾಧ್ಯಕ್ಷೆ ವೀಣಾ ಶಂಕರ್, ಉಪಾಧ್ಯಕ್ಷೆ ಜಯಲಕ್ಷ್ಮಿ, ಕಾರ್ಯದರ್ಶಿ ಬಿ.ಟಿ.ಗುರುರಾಜ್, ಪ್ರಧಾನ ಕಾರ್ಯದರ್ಶಿ ಸುಜೀತ್, ಚಂದ್ರಮ್ಮ, ವಿಜಯಮ್ಮ, ದೀಪಾರಾಮ್, ಕೆ. ನಾಗಮಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.