ಬೀದರ: ಮತ್ತೆ 7 ಪಾಸಿಟಿವ್
Team Udayavani, Jun 29, 2020, 9:08 AM IST
ಬೀದರ: ಜಿಲ್ಲೆಯಲ್ಲಿ ಒಂದೇ ದಿನ ಮೂವರನ್ನು ಬಲಿ ಪಡೆದು ಆರ್ಭಟಿಸಿದ್ದ ಕೋವಿಡ್ ಸೋಂಕು ರವಿವಾರ ಕೊಂಚ ತಗ್ಗಿದ್ದು, 7 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 562ಕ್ಕೆ ಏರಿಕೆ ಆಗಿದೆ. 55 ವರ್ಷದ ಪುರುಷ (ಪಿ-12189), 60 ವರ್ಷದ ವೃದ್ಧೆ (ಪಿ-12190), 64 ವರ್ಷದ ವೃದ್ಧೆ (ಪಿ-12191), 39 ವರ್ಷದ ಮಹಿಳೆ (ಪಿ-12192), 16 ವರ್ಷದ ಯುವತಿ (ಪಿ-12193), 43 ವರ್ಷದ ಪುರುಷ (ಪಿ-12194) ಮತ್ತು 45 ವರ್ಷದ ಪುರುಷ (ಪಿ-12195) ರೋಗಿಗಳಿಗೆ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಈವರೆಗೆ 562 ಪಾಸಿಟಿವ್ ಪ್ರಕರಣಗಳು ವರದಿ ಆದಂತಾಗಿದ್ದು, 19 ಜನ ಸಾವನ್ನಪ್ಪಿದ್ದರೆ 456 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 87 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
857 ಜನರ ವರದಿ ಬಾಕಿ: ಜಿಲ್ಲೆಯಲ್ಲಿ ಕೋವಿಡ್ ಶಂಕಿತ 857 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರಬೇಕಿದೆ. ರವಿವಾರ 137 ಜನ ಸೇರಿ ಈವರೆಗೆ 37,036 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 35,617 ಮಂದಿಯದ್ದು ನೆಗೆಟಿವ್ ಬಂದಿದೆ. ಸೋಂಕಿತರ ಪ್ರಥಮ ಸಂಪರ್ಕಿತ 5503 ಮತ್ತು ದ್ವಿತೀಯ ಸಂಪರ್ಕಿತ 6887 ಜನರನ್ನು ಗುರುತಿಸಲಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.