ಬೆಳೆ ವಿಮೆಗೆ ಹೆಸರು ನೋಂದಣಿ ಅವಧಿ ವಿಸ್ತರಣೆ: ರಾಘವೇಂದ್ರ
Team Udayavani, Jun 29, 2020, 10:14 AM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ನಿಗ ಪಡಿಸಿದ ದಿನಾಂಕವನ್ನು ಕೃಷಿಕರ ಹಿತದೃಷ್ಟಿಯಿಂದ ಜುಲೈ 31ರ ವರೆಗೆ ವಿಸ್ತರಿಸಲು ಕೋರಲಾಗಿದ್ದು, ಸರ್ಕಾರ ಅವಧಿ ವಿಸ್ತರಿಸುವ ಭರವಸೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಅಡಕೆ, ಶುಂಠಿ ಹಾಗೂ ಕಾಳುಮೆಣಸು ಮುಂತಾದ ತೋಟಗಾರಿಕಾ ಬೆಳೆಗಳಿಗೆ ಹವಾಮಾನ ಆಧಾರಿತ ವಿಮೆ ಮಾಡಿಸಲು ಜೂನ್ 30ರ ವರೆಗೆ ಹಾಗೂ ಮಾವು ಬೆಳೆಗೆ ಜುಲೈ 31ರವರೆಗೆ ನೋಂದಾಯಿಸಿಕೊಳ್ಳಲು ದಿನಾಂಕನಿಗ ಪಡಿಸಿ ಸರ್ಕಾರ ಜೂನ್ 25ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ, ಅವಧಿ ವಿಸ್ತರಿಸಬೇಕೆಂಬ ಸಂಸದರ ಕೋರಿಕೆಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪರಿಷ್ಕೃತ ಆದೇಶ ಶೀಘ್ರದಲ್ಲಿ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ಎರಡು ದಿನಗಳ ಅತ್ಯಂತ ಕಡಿಮೆ ಕಾಲಾವಾಕಾಶವಿದೆ. ಆದ್ದರಿಂದ, ಮಾವು ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗದೆ ನಿಗ ಪಡಿಸಲಾಗುವ ದಿನಾಂಕದೊಳಗಾಗಿ ಬೆಳೆ ವಿಮಾ ಕಂತು ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಹ ರೈತರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.