ಪೂರ್ಣಾವಧಿ ಕೋಚ್ ಆಗುವತ್ತ ಧೋನಿ ಹೆಜ್ಜೆ
ಜು.2ರಿಂದ ಧೋನಿ ಆನ್‌ಲೈನ್ ಕ್ರಿಕೆಟ್ ಅಕಾಡೆಮಿ ಪ್ರಾರಂಭ ; ಹಠಾತ್ ನಿವೃತ್ತಿ ಘೋಷಿಸಿದರೂ ಅಚ್ಚರಿ ಇಲ್ಲ!
Team Udayavani, Jun 29, 2020, 10:29 AM IST
ರಾಂಚಿ: ಭಾರತವನ್ನು ಎರಡು ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಎಂ.ಎಸ್.ಧೋನಿ ನಿವೃತ್ತಿ ವಿಚಾರವಾಗಿ ವರ್ಷಗಳಿಂದ ವಿವಿಧ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಲೇ ಇದೆ. ಆದರೆ ಧೋನಿ ಇದಕ್ಕೆಲ್ಲ ತಲೆ ಕೆಡಿಸಿಕೊಂಡಿಲ್ಲ, ಮೌನವಾಗಿಯೇ ಏನೂ ಆಗಿಲ್ಲ ಎನ್ನುವಂತೆ ತಮ್ಮ ಪಾಡಿಗೆ ತಾವಿದ್ದಾರೆ. ಅಂತಹ ಧೋನಿ ಇದೀಗ ಪೂರ್ಣಾವಧಿ ಕ್ರಿಕೆಟ್ ತರಬೇತುದಾರನಾಗುವತ್ತ ಹೆಜ್ಜೆ ಇಟ್ಟಿದ್ದಾರೆ. ಹೌದು, ಸದ್ಯ ಜಾರ್ಖಂಡ್‌ನಲ್ಲಿರುವ ಧೋನಿ ಜುಲೈ2 ರಂದು ಆನ್‌ಲೈನ್ ಕ್ರಿಕೆಟ್ ಅಕಾಡೆಮಿಯನ್ನು ಆರಂಭಿಸುತ್ತಿದ್ದಾರೆ. ಇದರೊಂದಿಗೆ ಧೋನಿ ಮುಂದಿನ ದಿನಗಳಲ್ಲಿ ಕ್ರಿಕೆಟ್ ಜೀವನಕ್ಕೆ ಹಠಾತ್ ನಿವೃತ್ತಿ ಘೋಷಿಸಿದರೂ ಅಚ್ಚರಿ ಇಲ್ಲ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.
ಸುಸಜ್ಜಿತ ಅಕಾಡೆಮಿ: ಜಾರ್ಖಂಡ್‌ನಲ್ಲಿ ಅಕಾಡೆಮಿಗೆ ಸ್ವತಃ ಧೋನಿ ಚಾಲನೆ ನೀಡಲಿದ್ದಾರೆ. ಒಟ್ಟಾರೆ ಯೋಜನೆಯ ಮುಖ್ಯಸ್ಥನಾಗಿ ಧೋನಿ ಇರಲಿದ್ದಾರೆ. ಇವರೊಂದಿಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟ್ ದಿಗ್ಗಜ ಡ್ಯಾರಿಲ್ ಕುಲ್ಲಿನಾನ್ ಇದ್ದಾರೆ. ಇವರು ಅಕಾಡೆಮಿಯ ಕೋಚಿಂಗ್ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಅಕಾಡೆಮಿಗೆ 200ಕ್ಕೂ ಹೆಚ್ಚು ತರಬೇತುದಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆನ್ ಲೈನ್ ಮೂಲಕ ಸದ್ಯ ತರಬೇತಿ ಆರಂಭಿಸಲಾಗುತ್ತಿದೆ. ಆದರೆ ಅದರ ರೂಪುರೇಷ, ಕಾರ್ಯ ವೈಖರಿ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಧೋನಿ 2017ರಲ್ಲಿ ದುಬೈನಲ್ಲಿ ಕ್ರಿಕೆಟ್ ಅಕಾಡೆಮಿ ತೆರೆದಿದ್ದರು. ಆದರೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಹೆಚ್ಚು ಬ್ಯುಸಿಯಾಗಿದ್ದರಿಂದ ಧೋನಿಗೆ ಅದರತ್ತ ಹೆಚ್ಚಿನ ಗಮನ ಕೊಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಕಾಡೆಮಿ ಅರ್ಧಕ್ಕೆ ನಿಂತು ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಣಕ್ಕಿಳಿಯಲಿದ್ದಾರೆ ಧೋನಿ?: ಯುವಕರಿಗೆ ಕ್ರಿಕೆಟ್ ಪಾಠಗಳನ್ನು ಕಲಿಸಿಕೊಡಲು ಸ್ವತಃ ಧೋನಿಯೇ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ. ಹಿಂದೆ ಧೋನಿ ಸತತ ಅಂತಾರಾಷ್ಟ್ರೀಯ ಕ್ರಿಕೆಟ್ ಕೂಟಗಳಲ್ಲಿ ಬ್ಯುಸಿಯಾಗಿರುತ್ತಿದ್ದರು ,ಆದರೆ ಸದ್ಯ ಧೋನಿ ಮನೆಯಲ್ಲೇ ಇದ್ದಾರೆ. ಹೀಗಾಗಿ ನೇರವಾಗಿಅಕಾಡೆಮಿ ಕೆಲಸಗಳಲ್ಲಿ ಹೆಚ್ಚು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.