ರೋಗನಿರೋಧಕ ಶಕ್ತಿ: ದೈನಂದಿನ ನಡಿಗೆಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ!


Team Udayavani, Jun 29, 2020, 5:51 PM IST

ದೈನಂದಿನ ನಡಿಗೆಯ ಪ್ರಯೋಜನಗಳು !

ನಾವು ಎಷ್ಟು ಹೆಚ್ಚು ನಡೆಯುತ್ತೇವೋ ಅಷ್ಟು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚುವರಿ ತೂಕವನ್ನುಇಳಿಸಲು, ದೇಹವನ್ನು ಹದಗೊಳಿಸಿ ಶರೀರದ ಆಕಾರವನ್ನೂ ಸರಿಪಡಿಸಲು ನಡಿಗೆ ಸಹಕಾರಿ ಸಾಮಾನ್ಯವಾಗಿ ಜನರು ನಡಿಗೆಗಾಗಿ ಹೊರಹೋಗಲು ದಿನದ ಎರಡು ಕಾಲಾವಧಿಗಳನ್ನು ಆರಿಸಿಕೊಳ್ಳುತ್ತಾರೆ. ಒ೦ದು ಬೆಳಗ್ಗೆ ಹಾಗೂ ಮತ್ತೊ೦ದು ಸಾಯ೦ಕಾಲ.

ಪ್ರತಿದಿನ ವಾಕ್ ಮಾಡುವುದರಿಂದ ಆರೋಗ್ಯದ ಲಾಭಗಳನ್ನು ಹೆಚ್ಚು ಪಡೆದುಕೊಳ್ಳಬಹುದು. ವಾಕ್ ಮಾಡುವುದರಿಂದ ಆಗುವ ಅದ್ಭುತ ಪ್ರಯೋಜನಗಳನ್ನು ತಿಳಿದುಕೊಳ್ಳೋಣ

ರೋಗನಿರೋಧಕ ಶಕ್ತಿ ಹೆಚ್ಚುತ್ತದೆ
ಸೋಂಕುಗಳು ಅಥವಾ ಯಾವುದೇ ರೋಗಗಳನ್ನು ತಡೆಗಟ್ಟಲು ದೇಹದ ಪ್ರತಿರಕ್ಷಣಾ ವ್ಯವಸ್ಥೆ ಎಲ್ಲಾ ಸಮಯದಲ್ಲೂ ಸರಿಯಾಗಿ ಕಾರ್ಯನಿರ್ವಹಿಸಬೇಕು. ರೋಗನಿರೋಧಕ ಶಕ್ತಿ ಹೆಚ್ಚಬೇಕೆಂದರೆ ವಾಕಿಂಗ್ ಮಾಡಲೇಬೇಕು. ಪ್ರತಿನಿತ್ಯ ವಾಕಿಂಗ್ ಮಾಡುವುದರಿಂದ ರೋಗನಿರೋಧಕ ಹೆಚ್ಚುತ್ತದೆ.

ಹೃದಯ ಸಂಬಂಧಿ ಕಾಯಿಲೆಗಳಿಗೆ ಕಡಿವಾಣ
ವಾಕಿಂಗ್ ಹೃದಯದ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಹೃದಯ ಮತ್ತು ಹೃದಯ ರಕ್ತನಾಳದ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ. ಆದ್ದರಿಂದ ಹೃದ್ರೋಗ, ಹೃದಯರಕ್ತನಾಳದ ಕಾಯಿಲೆ ಮತ್ತು ಪಾರ್ಶ್ವವಾಯುಗಳನ್ನು ಹತೋಟಿಯಲ್ಲಿಡಲು ವಾಕ್ ಸಹಾಯಕ .

ತೂಕ ಇಳಿಸಲು
ತೂಕ ಇಳಿಸಿಕೊಳ್ಳುವವರಿಗೆ ವಾಕಿಂಗ್ ಉತ್ತಮ ವ್ಯಾಯಾಮ.

ಬುದ್ಧಿವಂತಿಕೆ ಹೆಚ್ಚಿಸುತ್ತದೆ
ವಾಕಿಂಗ್ ನಮ್ಮ ಬುದ್ಧಿವಂತಿಕೆಯನ್ನು ಹೆಚ್ಚಿಸುತ್ತದೆ. ಮೆದುಳಿಗೆ ಅಗತ್ಯ ಪ್ರಮಾಣದ ಆಮ್ಲಜನಕ ಮತ್ತು ಗ್ಲೂಕೋಸ್ ಪೂರೈಕೆಯಾಗಿ, ಅಪಧಮನಿಗಳನ್ನು ಮುಚ್ಚುವ ಎಲ್ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಕಡಿಮೆ ಮಾಡುತ್ತದೆ.

ಎಲುಬುಗಳನ್ನು ಬಲಗೊಳ್ಳುತ್ತವೆ
ವಯಸ್ಸಾದಂತೆ ಮೂಳೆಗಳು ದುರ್ಬಲಗೊಳ್ಳುತ್ತವೆ. ಆದರೆ ನಿಯಮಿತವಾಗಿ ವಾಕ್ ಮಾಡುವ ಮೂಲಕ ಎಲುಬುಗಳನ್ನು ಬಲಪಡಿಸಬಹುದು. ಈ ವ್ಯಾಯಾಮವು ಮೂಳೆ ಸಾಂದ್ರತೆಯ ನಷ್ಟವನ್ನು ತಡೆಯುತ್ತದೆ.

ಸ್ನಾಯುಗಳು ಬಲಗೊಳ್ಳಲು
ವಯಸ್ಸಾದಂತೆ ಮೂಳೆಗಳ ಜೊತೆಗೆ ಸ್ನಾಯುಗಳ ಬಲ ಕಡಿಮೆಯಾಗುತ್ತದೆ. ವಾಕಿಂಗ್ ಮಾಡಿದರೆ ಸ್ನಾಯುಗಳನ್ನು ಬಲಗೊಳ್ಳುತ್ತವೆ. ನಿಯಮಿತವಾಗಿ ನಡೆಯುವುದರಿಂದ ಕಾಲು ಮತ್ತು ಬೆನ್ನಿನ ಸ್ನಾಯುಗಳನ್ನು ಬಲಪಡಿಸಬಹುದು.

ದೈಹಿಕ ಪರಿಶ್ರಮ/ವ್ಯಾಯಾಮ
ನಮ್ಮ ಶರೀರವನ್ನು ಸ್ವಸ್ಥವಾಗಿರಿಸಲು ಬೇಕಾದ ಪ್ರಮಾಣದಲ್ಲಿ ವ್ಯಾಯಾಮವನ್ನು ಪ್ರತಿದಿನವೂ ಪಡೆದ೦ತಾಗುತ್ತದೆ. ಸಮರ್ಪಕವಾದ ನಡಿಗೆಯ ಕ್ರಮವನ್ನನುಸರಿಸಿ 30 ರಿ೦ದ 60 ನಿಮಿಷಗಳವರೆಗೆ ನಡೆದರೂ ಸಾಕು. ಸ೦ಜೆಯ ಅಥವಾ ಬೆಳಗಿನ ನಡಿಗೆಯು ಒ೦ದು ಅತ್ಯುತ್ತಮವಾದ ಉಲ್ಲಾಸದಾಯಕ ಚಟುವಟಿಕೆಯಾಗಿದ್ದು, ಇದು ನಮ್ಮ ಮನಸ್ಸನ್ನು ಎಲ್ಲಾ ತೆರನಾದ ಒತ್ತಡದಿ೦ದ ಕೂಡಿದ ಚಿ೦ತೆಗಳಿ೦ದ ಮುಕ್ತಗೊಳಿಸುತ್ತದೆ.

ಮಧುಮೇಹದ ಆಪತ್ತನ್ನು ಕಡಿಮೆ ಮಾಡುತ್ತದೆ
ಮಧುಮೇಹದಿಂದ ಬಳಲುತ್ತಿರುವವರು ನಿಯಮಿತ ನಡಿಗೆಯು ಬಿ.ಎಮ್.ಐ.(Body and Mass Index) ಮಟ್ಟವನ್ನು ಸುಧಾರಿಸಲು ಸಹಾಯಮಾಡುತ್ತದೆ ಮತ್ತು ದೇಹದಲ್ಲಿರುವ ಇನ್ಸುಲಿನ್ ಸರಿಯಾದ ಮಟ್ಟದಲ್ಲಿಟ್ಟುಕೊಳ್ಳಲು ಸಹಾಯಮಾಡುತ್ತದೆ.

ನಿದ್ರೆಯನ್ನು ಸುಧಾರಿಸುತ್ತದೆ
ನಡಿಗೆಯು ಹಗಲಿನ ಶಕ್ತಿಯನ್ನು ವೃದ್ಧಿಸಲು ಸಹಾಯಮಾಡುತ್ತದೆ. ಇದರಿಂದ ದೀರ್ಘವಾದ ಮತ್ತು ಗಾಢವಾದ ನಿದ್ರೆಮಾಡಲು ಸಹಾಯವಾಗುತ್ತದೆ.ಪ್ರತಿ ನಿತ್ಯದ ನಡಿಗೆ ನಮ್ಮ ಅರೋಗ್ಯವನ್ನು ಹೆಚ್ಚು ಉತ್ತಮವಾಗಿ ನಿಭಾಯಿಸಲು ಸಾಧ್ಯ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.