ಜಮೀನು ಒತ್ತುವರಿ: ಸ್ವಾಮೀಜಿ ಮೇಲೆ ದುಷ್ಕರ್ಮಿಗಳ ಹಲ್ಲೆ
Team Udayavani, Jun 30, 2020, 6:43 AM IST
ಕುಣಿಗಲ್: ಮಠದ ಜಮೀನು ಒತ್ತುವರಿ ಮಾಡಿಕೊಂಡಿರುವ ಕಿಡಿಗೇಡಿಗಳು ಸ್ವಾಮೀಜಿ ಮೇಲೆ ಹಲ್ಲೆ ಮಾಡಿ, ಮಠದ ಮೇಲೆ ಕಲ್ಲು ತೂರಾಟ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಅಲ್ಕೆರೆ ಸಿದ್ಧಗಂಗಾ ಶಾಖಾ ಮಠದಲ್ಲಿ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಸಿದ್ಧಗಂಗಾ ಶಾಖಾ ಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹಲ್ಲೆಗೊಳಗಾದವರು.
ಅಲ್ಕೆರೆ ಸಿದ್ಧಗಂಗಾ ಮಠದ ಹೆಸರಿನಲ್ಲಿ 20 ಎಕರೆ ಜಮೀನಿದ್ದು, ಈ ಪೈಕಿ ಗ್ರಾಮಸ್ಥರ ಮನವಿ ಮೇರೆಗೆ ಲಿಂಗೆ„ಕ್ಯ ಶಿವಕುಮಾರ ಮಹಾ ಸಾಮೀಜಿ ಅವರು ಗ್ರಾಮದ ಸರಕಾರಿ ಪ್ರೌಢಶಾಲೆಗೆ 2 ಎಕರೆ ಜಮೀನನ್ನು ದಾನವಾಗಿ ನೀಡಿದ್ದಾರೆ. ಉಳಿಕೆ ಜಮೀನಿನಲ್ಲಿ ಅಕ್ಕಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಲ್ಕೆರೆ ಸಿದ್ಧಗಂಗಾ ಮಠದ ಸ್ವಾಮೀಜಿ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ಸರ್ವೆ ಮಾಡಿಸಿ ಒತ್ತುವರಿ ತೆರವಿಗೆ ಮುಂದಾಗಿದ್ದರು.
ಈ ಸಂಬಂಧ ಸರ್ವೆ ಕಾರ್ಯವೂ ಮುಗಿದು ಒತ್ತವರಿ ತೆರವು ಮಾಡಿಕೊಡಲು ಒತ್ತು ವರಿದಾರರಿಗೂ ತಿಳಿಸಲಾಗಿತ್ತು. ಭಾನು ವಾರ ಸಂಜೆ ಮಠದ ಜಮೀನು ಹದ್ದು ಬಸ್ತು ಮಾಡಿಕೊಳ್ಳಲು ಸ್ವಾಮೀಜಿ ಕೆಲಸ ಮಾಡಿಸುವ ವೇಳೆ ಒತ್ತುವರಿದಾರರು ಏಕಾಏಕಿ ದಾಳಿ ಮಾಡಿ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿ ಮಠದ ಮೇಲೆ ಕಲ್ಲು ತೂರಿ ಮಠದ ಕಿಟಕಿ ಗಾಜುಗಳಿಗೆ ಹಾನಿ ಮಾಡಿದ್ದಾರೆ.
ಸಾಮೀಜಿ ಅವರಿಗೆ ಯಾವುದೇ ಗಾಯವಾಗಿಲ್ಲ. ಸಾಮೀಜಿ ಮೇಲೆ ಹಲ್ಲೆ ನಡೆಸಿ ಮಠಕ್ಕೆ ಕಲ್ಲು ತೂರಿರುವ ಒತ್ತುವರಿದಾರರ ವಿರುದ್ಧ ಕುಣಿಗಲ್ ಪೋಲಿಸರು ಪ್ರಕರಣ ದಾಖ ಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ. ವಿಷಯ ತಿಳಿದು ಸೋಮವಾರ ಶಾಸಕ ಡಾ.ರಂಗನಾಥ್, ಡಿವೈಎಸ್‌ಪಿ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಸ್ವಾಮೀಜಿ ಅವ ರೊಂದಿಗೆ ಗ್ರಾಮಸ್ಥರ ಸಭೆ ನಡೆಸಿ ಒತ್ತುವರಿ ಯಾಗಿರುವ ಮಠದ ಜಮೀನು ತೆರವು ಮಾಡಿಕೊಡಬೇಕೆಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.