ಕುರಿಗಾಹಿಗೆ ಸೋಂಕು: ಕ್ವಾರಂಟೈನ್‌ಗೆ 40 ಕುರಿ
Team Udayavani, Jun 30, 2020, 6:47 AM IST
ತುಮಕೂರು: ಜಿಲ್ಲೆಯಲ್ಲಿ ಕುರಿಗಾಹಿಗೆ ಕೋವಿಡ್ 19 ಸೋಂಕು ಹರಡಿರುವ ಹಿನ್ನೆಲೆ ಆತ ಕಾಯುತ್ತಿದ್ದ 40 ಕುರಿಗಳನ್ನೂ ಕ್ವಾರಂ ಟೈನ್ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ. ಈ ಕುರಿಗಳನ್ನು ಸಮೂಹದಲ್ಲಿ ಮೇಯಲು ಬಿಡದಂತೆ ಕ್ರಮ ವಹಿಸ ಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆ ಯಲ್ಲಿ ಮಾತನಾಡಿ, ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ವ್ಯಕ್ತಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ ಎಂದರು.
ಕುರಿ ಗಂಟಲು ದ್ರವ ಪರೀಕ್ಷೆ: ಈತ ಮೇಯಿ ಸುತ್ತಿದ್ದ 40 ಕುರಿಗಳನ್ನು ಪ್ರತ್ಯೇಕವಾಗಿರಿಸಲಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುರಿಗಾಹಿಗೆ ಕೋವಿಡ್ 19 ಸೋಂಕು ಹಿನ್ನೆಲೆ ಕುರಿಗಳನ್ನೂ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈಗ ಕೋವಿಡ್ 19 ಯಾವರೀತಿ ಬರುತ್ತಿದೆ ಎನ್ನುವುದು ತಿಳಿಯುತ್ತಿಲ್ಲ.
ಕೋವಿಡ್ 19 ವೈರಸ್ ವಿಭಿನ್ನ ಸ್ವರೂಪದಲ್ಲಿ ಇರುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ಕುರಿಗಳ ಗಂಟಲು ದ್ರವ ಸಂಗ್ರಹಿಸಿ ಭೂಪಾಲ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿ ತಪಾಸಣೆ ಮಾಡಿಸುವಂತೆ ಪಶು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.
ಅಧಿಕಾರಿಗಳಿಗೆ ಸೂಚನೆ: ನಾವು ಕೇಳಿರು ವಂತೆ ಇಲ್ಲಿಯವರೆಗೂ ಕೋವಿಡ್ 19 ಕುರಿಗಳ ಮೂಲಕ ಹರಡಿದೆ ಎಂಬುದಕ್ಕೆ ಸಾಕ್ಷ್ಯವಿಲ್ಲ. ಆದರೂ ಕೋವಿಡ್ 19 ವಿಭಿನ್ನ ಸ್ವರೂಪದಲ್ಲಿರು ವುದರಿಂದ ಕುರಿಗಳ ದ್ರವವನ್ನು ತೆಗೆದು ಪರೀಕ್ಷಿಸಲು ಸೂಚಿಸಲಾಗಿದೆ. ವರದಿ ಬರುವ ವರೆಗೆ ಕುರಿಗಳನ್ನು ಗುಂಪಿನಲ್ಲಿ ಮೇಯಲು ಬಿಡಬಾರದು, ಕುರಿಗಳ ಗಂಟಲು ದ್ರವದ ಮಾದರಿ ವರದಿ ಬಂದ ಮೇಲೆ ಅದರ ವರದಿ ನೋಡಿ ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಬ್ಬರನ್ನು ಪರೀಕ್ಷಿಸಿ: ತುಮಕೂರು ಜಿಲ್ಲೆಯಲ್ಲಿ ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಕಂಟೈನ್‌ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರನ್ನೂ ತಪಾ ಸಣೆಗೆ ಒಳಪಡಿಸಿ ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್ ಪ್ರಯೋಗಾಲಯವಿರು ವುದರಿಂದ ಹೆಚ್ಚಿನ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುತ್ತದೆ ಎಂದರು.
ಮೆಡಿಕಲ್‌ಗಳ ವಿರುದ್ಧ ಕ್ರಮ: ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್‌ಗಳನ್ನು ಜಾಸ್ತಿ ಮಾಡಿ, μàವರ್ ಕ್ಲಿನಿಕ್‌ಗೆ ಬಂದ ಪ್ರತಿಯೊಬ್ಬರಿಗೂ ಚೆಕ್ ಮಾಡಿ ಎಂದ ಅವರು, ಜಿಲ್ಲೆಯಲ್ಲಿರುವ ನಕಲಿ ವೈದ್ಯರು ಹಾಗೂ ಚೀಟಿಯಿಲ್ಲದೆ ಜ್ವರ, ನೆಗಡಿ, ಶೀತ, ಉಸಿರಾಟ ತೊಂದರೆಗೆ ಔಷಧಿಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಯನ್ನು ಮತ್ತೂಮ್ಮೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅವರಿಗೆ ಸೂಚನೆ ನೀಡಿದರು.
ಸೋಂಕಿತರ ಸ್ಥಳಾಂತರ: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಾಖ ಲಾಗಿರುವ ಬಹುತೇಕ ಸೋಂಕಿತರಿಗೆ ಸೋಂಕಿನ ಲಕ್ಷಣಗಳೇ ಕಂಡು ಬಂದಿಲ್ಲ. ಈ ಪೈಕಿ 8 ಮಂದಿಗೆ ಮಾತ್ರ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಸೋಂಕಿನ ಲಕ್ಷಣಗಳಿಲ್ಲದವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲು ಅವಕಾಶ ವಿದ್ದು, ತುಮಕೂರು ನಗರದ ಹೊರ ವಲಯದಲ್ಲಿರುವ ಟ್ರಕ್‌ಟರ್ಮಿಲ್ ಸಮೀ ಪದ ಕಟ್ಟಡಕ್ಕೆ ಎರಡೂ¾ರು ದಿನಗಳಲ್ಲಿ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗು ವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಸಭೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.