ಮಾರ್ಗಸೂಚನೆ ಪ್ರಕಾರ ಆನ್‌ಲೈನ್‌ ಶಿಕ್ಷಣ

Team Udayavani, Jun 30, 2020, 6:58 AM IST

arga-shikshana

ಕೋಲಾರ: ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಮಕ್ಕಳಿಗೆ ಹೊರೆಯಾಗದೇ ಖುಷಿ ನೀಡುವ ರೀತಿಯಲ್ಲಿ ಆನ್‌ಲೈನ್‌ ಶಿಕ್ಷಣ ನೀಡಬೇಕೆಂಬುದು ನನ್ನ ಅಪೇಕ್ಷೆ, ಗ್ರಾಮೀಣ ಮಕ್ಕಳನ್ನು ಗಮನದಲ್ಲಿಟ್ಟುಕೊಂಡೇ ಅಗತ್ಯ ನಿರ್ಧಾರ  ಕೈಗೊಳ್ಳುವುದಾಗಿ ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದರು.

ತಾಲೂಕಿನ ವೇಮಗಲ್‌ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ  ಮಾತನಾಡಿದರು. ಪರೀಕ್ಷಾ ಕೇಂದ್ರವಲ್ಲ ಸುರಕ್ಷಾ ಕೇಂದ್ರ: ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದು, ಮಕ್ಕಳ ಹಾಜರಾತಿ ಶೇ.98 ರಷ್ಟಿದೆ, ಮೂರನೇ ಮುಖ್ಯ ಪರೀಕ್ಷೆ ವಿಜ್ಞಾನವಾಗಿದ್ದು, ಮಕ್ಕಳಲ್ಲಿ ಸುರಕ್ಷತೆ ಮತ್ತು ಆತ್ಮವಿಶ್ವಾಸ  ತುಂಬುವುದೇ ಉದ್ದೇಶ ವಾಗಿದೆ ಎಂದರು.

ಒಂದೂ ಮಗುವಿಗೆ ತೊಂದರೆಯಾಗದ ರೀತಿ ಜಿಲ್ಲಾ ಡಳಿತ ಕ್ರಮ ವಹಿಸಿದೆ, ಮುಂದಿನ ಮೂರು ಪರೀಕ್ಷೆಗೂ ಇದೇ ರೀತಿ ಎಚ್ಚರವಹಿಸಿ, ಮಕ್ಕಳಲ್ಲಿ ಇದು ಪರೀಕ್ಷಾ ಕೇಂದ್ರವಲ್ಲ, ಸುರಕ್ಷಾ ಕೇಂದ್ರ  ಎಂಬ ಭಾವನೆ ಮೂಡಬೇಕು ಎಂದರು.ರಾಜ್ಯದ ಎಲ್ಲ ಜನಪ್ರತಿನಿ ಧಿಗಳು ಪರೀಕ್ಷೆಗೆ ಸಹಕಾರ ನೀಡಿದ್ದಾರೆ, ಈ ಮಕ್ಕಳಿಗೆ ಇಡೀ ರಾಜ್ಯದ ಜನತೆ ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶ ರವಾನೆಯಾಗಿದ್ದು, ಎಲ್ಲರಿಗೂ ಧನ್ಯವಾದ  ಸಲ್ಲಿಸುವುದಾಗಿ ತಿಳಿಸಿದರು.

ಆನ್‌ಲೆ„ನ್‌ ಶಿಕ್ಷಣ ಬದಲಿ ಶಿಕ್ಷಣವಲ್ಲ: ಗ್ರಾಮೀಣ ಮಕ್ಕಳು ಆನ್‌ಲೆ„ನ್‌ ತಂತ್ರಜ್ಞಾನದಿಂದ ವಂಚಿತರಾಗುವರೆಂಬ ಭಾವನೆ ಬೇಡ, ಗ್ರಾಮೀಣರನ್ನು ವಿಶೇಷವಾಗಿ ದೃಷ್ಟಿಯಲ್ಲಿಟ್ಟುಕೊಂಡೇ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ತಜ್ಞರ  ಸಮಿತಿ ಸೂಚನೆಯಂತೆ ಈಗಾಗಲೇ ಸರ್ಕಾರಿ ಶಾಲೆಗಳ ಮಕ್ಕಳ ಮನೆಗಳಲ್ಲಿ ರೇಡಿಯೋ, ಟಿವಿ. ಸ್ಮಾರ್ಟ್‌ ಫೋನ್‌, ಇಂಟರ್‌ನೆಟ್‌ ಎಷ್ಟು ಮಂದಿ ಮನೆಯಲ್ಲಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಿರುವುದಗಿ ತಿಳಿಸಿದರು.

ಆನ್‌ಲೈನ್‌  ಶಿಕ್ಷಣ  ದಲಿ ಶಿಕ್ಷಣವಾಗಲು ಸಾಧ್ಯವಿಲ್ಲ, ಪೂರಕ ಶಿಕ್ಷಣ ಅಷ್ಟೇ ಎಂದ ಅವರು, ಶೇ.90 ಮಂದಿಗೆ ಈ ಆನ್‌ಲೈನ್‌ ಶಿಕ್ಷಣ ತಲುಪಿ ಸಬಹುದು ಉಳಿದ ಶೇ.10 ಮಕ್ಕಳ ಪಾಡೇನು ಎಂಬ ಆಲೋಚನೆಯೂ ಇದೆ ಎಂದರು. ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ  ಆನ್‌ಲೆ„ನ್‌ ಶಿಕ್ಷಣದಲ್ಲಿ ತಂದೆ, ಪೋಷಕರ ಜತೆಗೆ ಶಿಕ್ಷಕರು ವಾರಕ್ಕೊಮ್ಮೆ ಮಾತನಾಡಿ, ಸಂವಾದ ನಡೆಸಿ ಆ ಮಕ್ಕಳ ಶೆ„ಕ್ಷಣಿಕ ಪ್ರಗತಿಗೆ ಸ್ಪಂದಿಸುವ ಕೆಲಸ ಮಾಡುವರು ಎಂದರು.

ನನ್ನ ತಾಯಿ ಸರಕಾರಿ ಶಾಲೆ ಶಿಕ್ಷಕಿಯಾಗಿದ್ದವರು, ಈ  ಶಾಲೆಯ ಋಣ ನನ್ನಮೇಲಿದೆ, ನಾನು ಯಾರ ಲಾಭಿಗೂ ಒಳಗಾಗುವುದಿಲ್ಲ, ನನ್ನದು ಮಕ್ಕಳ ಲಾಭಿ ಅಷ್ಟೆ, ಯಾವ ಸೂಚನೆ, ಆದೇಶವೂ ಇಲ್ಲ ಎಂದರು. ರಾಜ್ಯ ಅಬಕಾರಿ ಸಚಿವ ಎಚ್‌.ನಾಗೇಶ್‌,  ವಿಧಾನಪರಿಷತ್‌ ಸದಸ್ಯ ವೈ.ಎ.  ನಾರಾಯಣ ಸ್ವಾಮಿ, ಜಿಪಂ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌, ಜಿಪಂ ಸಿಇಒ ದರ್ಶನ್‌, ಡಿಡಿಪಿಐ ಕೆ.ರತ್ನಯ್ಯ, ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌. ನಾಗೇಂದ್ರ ಪ್ರಸಾದ್‌, ತಹಶೀಲ್ದಾರ್‌ ಶೋಭಿತಾ, ಬಿಇಒ ಕೆ.ಎಸ್‌.ನಾಗರಾಜಗೌಡ,  ಶಿಕ್ಷಣಾಧಿಕಾರಿ ಸಿ.ಆರ್‌.ಅಶೋಕ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.