ಮಹಾನಗರ ಪಾಲಿಕೆ ಮಹಿಳಾ ಅಭಿಯಂತರರಿಗೆ ಕೋವಿಡ್
Team Udayavani, Jun 30, 2020, 8:45 AM IST
ಕಲಬುರಗಿ: ಕೋವಿಡ್ ಆರ್ಭಟ ಮುಂದುವರೆದಿದ್ದು, ಪೊಲೀಸರು, ಆಶಾ ಕಾರ್ಯಕರ್ತೆಯರ ನಂತರ ಮಹಾನಗರ ಪಾಲಿಕೆ ಮಹಿಳಾ ಅಭಿಯಂತರರೊಬ್ಬರಿಗೆ ಮಹಾಮಾರಿ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿದೆ.
ಕಳೆದ ಕೆಲ ದಿನಗಳ ಹಿಂದೆ ತಮ್ಮ ಸ್ವಂತ ಜಿಲ್ಲೆ ಬೀದರ್‌ಗೆ ಹೋಗಿ ಬಂದ ನಂತರ ಕೆಮ್ಮು, ಜ್ವರದ ಲಕ್ಷಣ ಕಾಣಿಸಿಕೊಂಡಿದ್ದವು. ಹೀಗಾಗಿ ಅವರೇ ಕೋವಿಡ್ ಪರೀಕ್ಷೆಗಾಗಿ ಗಂಟಲು ದ್ರಾವಣ ಮಾದರಿ ನೀಡಿ ತಪಾಸಣೆಗೆ ಒಳಪಟ್ಟಿದ್ದರು. ಇದೀಗ ಅವರಿಗೆ ಸೋಂಕು ದೃಢಪಟ್ಟಿದ್ದು, ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಯಂತರರಿಗೆ ಸೋಂಕು ಖಚಿತವಾದ ಕಾರಣ ಅವರ ಸಂಕರ್ಪಕ್ಕೆ ಬಂದವರ ಗಂಟಲು ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲು ಪಾಲಿಕೆ ಆಯುಕ್ತರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತ, ಪೊಲೀಸರಿಗೆ ಕೋವಿಡ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗುಲಬರ್ಗಾ ವಿವಿ ಠಾಣೆ, ಗ್ರಾಮೀಣ ಠಾಣೆ, ಫರಹತಾಬಾದ ಠಾಣೆ ಬಳಿಕ ರೋಜಾ ಪೊಲೀಸ್ ಠಾಣೆ ಸಿಬ್ಬಂದಿಗೂ ಕೋವಿಡ್ ವಕ್ಕರಿಸಿದೆ. ರೋಜಾ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಗೆ ದೃಢಪಟ್ಟಿದೆ. ಅಲ್ಲದೇ, ಕೆಎಸ್‌ಆರ್‌ಪಿಯ ಓರ್ವ ಪೇದೆಗೂ ಸೋಂಕು ಕಾಣಿಸಿಕೊಂಡಿದೆ ಎಂದು ಗೊತ್ತಾಗಿದ್ದು, ಒಟ್ಟು ಎಂಟು ಜನರು ಪೊಲೀಸರು ಸೋಂಕಿನಿಂದ ಬಳಲುವಂತೆ ಆಗಿದೆ. ಸೋಮವಾರ 23 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,421ಕ್ಕೆ ಏರಿಕೆಯಾಗಿದೆ. ಇದೇ ವೇಳೆ 39 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇಲ್ಲಿವರೆಗೆ 1,048 ಸೋಂಕಿತರು ಆಸತ್ರೆಯಿಂದ ಮನೆಗೆ ತೆರಳಿದಂತೆ ಆಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 18 ಜನ ಸೋಂಕಿತರು ಕೋವಿಡ್ ಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.