ಎಪಿಎಂಸಿಗೆ ಮೂವರ ನಾಮನಿರ್ದೇಶನ
Team Udayavani, Jun 30, 2020, 9:24 AM IST
ಸಾಂದರ್ಭಿಕ ಚಿತ್ರ
ಬೀದರ: ಬೀದರ ಎಪಿಎಂಸಿ ಸದಸ್ಯರನ್ನಾಗಿ ಸರ್ಕಾರ ಮೂವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಮುಂಚಿತವಾಗಿ ಇವರ ನೇಮಕ ಮಾಡಲಾಗಿದೆ.
ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿರುವ ಅರವಿಂದ ಪಾಟೀಲ ಚಿಲ್ಲರ್ಗಿ, ಧನರಾಜ ಪೋಶೆಟ್ಟಿ ಬಗದಲ್ ಹಾಗೂ ನೀಲಾಂಬಿಕಾ ಬಸವರಾಜ ಆಣದೂರು ಅವರನ್ನು ನೇಮಿಸಿ ಸಹಕಾರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎಸ್.ಮಂಜುನಾಥ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ಈ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಪಿಎಂಸಿ ಆಡಳಿತದ ಚುಕ್ಕಾಣಿ ಮತ್ತೆ ತನ್ನ ಕೈಯಲ್ಲಿ ಹಿಡಿದಿಟ್ಟುಕೊಳ್ಳಲು ಆಡಳಿತಾರೂಢ ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಸಹಕಾರ ಸಚಿವರನ್ನು ಭೇಟಿಯಾಗಿ ಮೂವರ ನಾಮ ನಿರ್ದೇಶನಕ್ಕೆ ಮನವಿ ಮಾಡಿದ್ದು, ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.