ಕೋವಿಡ್ ಚಿಕಿತ್ಸೆಯ ಮೇಲೆ ನಿಗಾ ಇಡಲು ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಿ: ಸಿದ್ದರಾಮಯ್ಯ
Team Udayavani, Jun 30, 2020, 2:49 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ದೂರುಗಳು ಇವುಗಳ ಮೇಲೆ ನಿಗಾ ಇಡಲು ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳಲ್ಲಿರುವ ವೃತ್ತಿನಿರತ ನಾಯಕರನ್ನು ಹಾಗೂ ವೈದ್ಯಕೀಯ ಶಿಕ್ಷಣ ಪಡೆದಿರುವವರನ್ನು ಸಮಿತಿಗೆ ಸೇರಿಸಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್-19 ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. ಮುಖ್ಯಮಂತ್ರಿಯವರೆ ಈ ಕಡೆ ಗಮನ ಹರಿಸಿ ಎಂದಿದ್ದಾರೆ.
ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ,ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಯಡಿಯೂರಪ್ಪನವರೇ ಇದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.