ಪ್ರತಿ ಭಾನುವಾರ ಪೂರ್ಣ ಲಾಕ್ ಡೌನ್
Team Udayavani, Jun 30, 2020, 5:59 PM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊವಿಡ್ ನಿಯಂತ್ರಿಸಲು ಜು.5 ರಿಂದ ಆ.2ರವರೆಗೆ ಪ್ರತಿ ಭಾನುವಾರ ಪೂರ್ಣ ಲಾಕ್‌ಡೌನ್ ಇರಲಿದೆ ಎಂದು ಡಿಸಿ ಹರೀಶ್‌ಕುಮಾರ್‌ಹೇಳಿದ್ದಾರೆ.
ಕೊವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಸರ್ಕಾರವು ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಹೆಚ್ಚಿನ ಮುಂಜಾಗೃತಾ ಕ್ರಮ ತೆಗೆದುಕೊಂಡಿದೆ. ಈ ಸಂಬಂಧ ಹಾಲಿ ಚಾಲ್ತಿಯಲ್ಲಿರುವ ಮುಂಜಾಗ್ರತಾ ಕ್ರಮಗಳ ಜತೆಗೆ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಪರಿಷ್ಕೃತಮಾರ್ಗಸೂಚಿಗಳನ್ನು ಹೊರಡಿಸಿದೆ.
ಸರ್ಕಾರದ ಆದೇಶದನ್ವಯ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಹೊರತುಪಡಿಸಿ ಜು.5ರಿಂದ ಪ್ರತಿ ಆ.2ರವರೆಗೆ ಪ್ರತಿ ಭಾನುವಾರ ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಚಲನವಲನಗಳನ್ನು ನಿಷೇಧಿಸಲು ಸಹ ಸೂಚಿಸಲಾಗಿದೆ. ಆದ್ದರಿಂದ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಜಿಲ್ಲಾಧಿಕಾರಿ ಡಾ| ಕೆ.ಹರೀಶಕುಮಾರ್ ಅವರು ಜಿಲ್ಲೆಯಾದ್ಯಂತ ಈ ಆದೇಶ ಜಾರಿಗೊಳಿಸಿದ್ದಾರೆ.
ಈ ನಿಷೇಧಿತ ಅವಧಿಯಲ್ಲಿ ಸಾರ್ವಜನಿಕರಿಗೆ ವೈದ್ಯಕೀಯ ಹೊರತುಪಡಿಸಿ ಯಾವುದೇ ಕಾರಣಕ್ಕೂ ಪ್ರತಿದಿನ (ಭಾನುವಾರ ಹೊರತುಪಡಿಸಿ) ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಹೊರಗಡೆ ಸಂಚರಿಸ ತಕ್ಕದ್ದಲ್ಲ. ನಿಷೇಧಿತ ಅವಧಿಯ ಪ್ರತಿ ಭಾನುವಾರದಂದು ಪೂರ್ಣ ದಿನ ಸಾರ್ವಜನಿಕರಿಗೆ ವೈದ್ಯಕೀಯ ಕಾರಣಕ್ಕೆ ಹೊರತುಪಡಿಸಿ ಬೇರೆ ಯಾವುದೇ ಕಾರಣಕ್ಕೆ ಮನೆಯಿಂದ ಹೊರಬರತಕ್ಕದ್ದಲ್ಲ. ಈ ನಿರ್ಬಂಧ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್ ಅಯ್ಯರ್
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.