ಕೌಟುಂಬಿಕ ಕಲಹ: ನಡುಬೀದಿಯಲ್ಲೇ ಪತ್ನಿಯನ್ನು ಇರಿದು ಕೊಂದ ಪತಿ
Team Udayavani, Jul 1, 2020, 12:12 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ನಡುಬೀದಿಯಲ್ಲೇ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಲವಕುಶ ನಗರ ನಿವಾಸಿಯಾಗಿರುವ ಹೇಮಾ (32) ಮೃತ ಮಹಿಳೆ. ಕೃತ್ಯ ಎಸಗಿದ ಬಳಿ ಆರೋಪಿ ಪತಿ ಮಂಜುನಾಥ್ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಮಂಜುನಾಥ್ ಟೆಂಪೋ ಟ್ರಾವೆಲ್ಲರ್ ಚಾಲಕನಾಗಿದ್ದು, ಹೇಮಾ ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದ. ಮೂಲತಃ ಹಾಸನ ಜಿಲ್ಲೆಯವನಾಗಿರು ಮಂಜುನಾಥ್ ತುಮಕೂರು ಜಿಲ್ಲೆಯ ಹೇಮಾ ಅವರನ್ನು 12 ವರ್ಷಗಳ ಹಿಂದೆ ವಿವಾಹವಾಗಿದ್ದ. ಈ ದಂಪತಿಗೆ ಒಂದು ಗಂಡು ಹಾಗೂ ಹೆಣ್ಣು ಮಗುವಿದೆ. ದಂಪತಿಗಳ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು ಎಂಬ ವಿಚಾರವೂ ಇದೀಗ ತಿಳಿದುಬಂದಿದೆ.
ಪತಿ ವಿರುದ್ಧ ಪತ್ನಿ ಹೇಮಾ ಈ ಹಿಂದೆ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಿರಿಯರು ರಾಜೀ ಸಂಧಾನ ನಡೆಸಿದ್ದ ಬಳಿಕ ದಂಪತಿ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಆದರೂ ಇವರಿಬ್ಬರ ನಡುವೆಪದೇ ಪದೇ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅದೇ ರೀತಿಯಲ್ಲಿ ಮಂಗಳವಾರ ಸಂಜೆಯೂ ದಂಪತಿ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ಹೋಗಿದೆ. ಮನೆಯಲ್ಲಿ ಪತ್ನಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಮಂಜುನಾಥ್ ಮನೆಯಲ್ಲಿದ್ದ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಹೇಮಾ ಕೂಗಿಕೊಂಡು ಮನೆಯಿಂದ ಹೊರಗೆ ಓಡಿ ಬಂದಿದ್ದು, ಆರೋಪಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದ.
ಪತಿಯಿಂದ ಇರಿತಕ್ಕೊಳಗಾಗಿ ತೀವ್ರ ರಕ್ತಸ್ರಾವವಾಗಿ ರಸ್ತೆಯಲ್ಲಿ ಬಿದ್ದಿದ್ದ ಹೇಮಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ತಾನೇ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ರಾಜಗೋಪಾಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.