ಕೋವಿಡ್: 4,500 ಹಾಸಿಗೆ; ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕಾಯ್ದಿರಿಸಲು ಒಪ್ಪಿಗೆ
Team Udayavani, Jul 1, 2020, 6:58 AM IST
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಅನಂತರ ಖಾಸಗಿ ವೈದ್ಯಕೀಯ ಕಾಲೇಜುಗಳು ಕೂಡ
ಕೋವಿಡ್ 19 ಸೋಂಕಿನ ಚಿಕಿತ್ಸೆಗೆ ಹಾಸಿಗೆ ಕಾಯ್ದಿರಿಸಲು ಒಪ್ಪಿಗೆ ನೀಡಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ನಡೆಸಿದ ಮಾತುಕತೆ ಯಶಸ್ವಿಯಾಗಿದೆ.
ಮಂಗಳವಾರ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಒಂದು ಹಂತದ ಸಭೆಯ ಬಳಿಕ ಮತ್ತೂಂದು ಹಂತದ ಸಭೆ ಡಾ| ಸುಧಾಕರ್ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಪರಿಸ್ಥಿತಿ ಅರಿತು ಖಾಸಗಿ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳು ಸರ ಕಾರದ ನಿರ್ಧಾರಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಭರವಸೆ ನೀಡಿದವು.
ರಾಜಧಾನಿಯ ಖಾಸಗಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ 10 ಸಾವಿರ ಹಾಸಿಗೆಗಳಿದ್ದು, ಈ ಪೈಕಿ ಶೇ.50ರಷ್ಟು ಅಂದರೆ 4.500 ಹಾಸಿಗೆಗಳನ್ನು ಕಾಯ್ದಿರಿಸಲು ಒಪ್ಪಿವೆ. ತೀವ್ರ ನಿಗಾ ಘಟಕದ ಹಾಸಿಗೆ, ವೆಂಟಿಲೇಟರ್ ಸಹಿತ ಹಾಸಿಗೆ ಒಳಗೊಂಡಂತೆ ತಜ್ಞರು, ವೈದ್ಯರು, ಅರೆವೈದ್ಯಕೀಯ ಸಿಬಂದಿ ಕೂಡ ಕೋವಿಡ್ ಚಿಕಿತ್ಸೆಗೆ ನೆರವು ನೀಡಲಿದ್ದಾರೆ ಎಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮಾಲಕರು ಹೇಳಿದ್ದಾರೆ. ಮುಂದಿನ 10 -15 ದಿನಗಳಲ್ಲಿ 4,500 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಕಾಯ್ದಿರಿಸಲಿದ್ದೇವೆ ಎಂದರು.
ಇದರ ಬೆನ್ನಲ್ಲೇ ಸರಕಾರವು ಮಾರ್ಗಸೂಚಿ ಹೊರಡಿಸಲು ಸಿದ್ಧತೆ ನಡೆಸಿದೆ. ಕೋವಿಡ್ 19 ಸೋಂಕು ಪೀಡಿತರ ಪೈಕಿ ರೋಗ ಲಕ್ಷಣ ಇರುವವರು, 60 ವರ್ಷ ದಾಟಿದವರು, ಗಂಭೀರ ಕಾಯಿಲೆ ಇರುವ ವರನ್ನು ಮಾತ್ರ ಕೋವಿಡ್ ಆಸ್ಪತ್ರೆಗೆ ದಾಖಲಿಸಲು ತೀರ್ಮಾನಿಸಿದೆ.
ಖಾಸಗಿ ಆಸ್ಪತ್ರೆಗಳಿಗೆ ಗೊತ್ತುಪಡಿಸಿದ ಚಿಕಿತ್ಸಾ ದರದ ಕ್ರಮದಲ್ಲೇ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲೂ ಚಿಕಿತ್ಸಾ ದರ ನಿಗದಿಪಡಿಸಲಾಗಿದೆ. ಮಾರ್ಗಸೂಚಿ ಸದ್ಯದಲ್ಲೇ ಹೊರಬೀಳುವ ನಿರೀಕ್ಷೆಯಿದೆ.
ಉತ್ತಮ ಸ್ಪಂದನೆ
ಸಭೆ ಬಳಿಕ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಖಾಸಗಿ ವೈದ್ಯಕೀಯ ಕಾಲೇಜುಗಳ ಮಾಲಕರು, ಅಧ್ಯಕ್ಷರು ಉತ್ತಮವಾಗಿ ಸ್ಪಂದಿಸಿದ್ದಾರೆ. ತಮ್ಮ ಆಸ್ಪತ್ರೆಗಳಲ್ಲಿ ಶೇ.50ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಅಗತ್ಯ ಸೌಲಭ್ಯದೊಂದಿಗೆ ನೀಡುವುದಾಗಿ ಭರವಸೆಯಿತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.