ಚೆಕ್‌ಪೋಸ್ಟ್‌ಗಳ ಕಾರ್ಯನಿರ್ವಹಣೆಗೆ ಡೀಸಿ ಸೂಚನೆ
Team Udayavani, Jul 1, 2020, 6:11 AM IST
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಹರಡದಂತೆ ತಡೆಯಲು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ದಿಸೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವಂತಹ ಮೈಸೂರು ಜಿಲ್ಲೆಯಿಂದ ಹಾಗೂ ಅಕ್ಕ ಪಕ್ಕದ ರಾಜ್ಯಗಳಿಂದ ಬರುವಂತಹ ಪ್ರಯಾಣಿಕರ ಮೇಲೆ ನಿಗಾ ವಹಿಸುವ ಹಾಗೂ ಜಿಲ್ಲೆಯಿಂದ ಅನವಶ್ಯಕವಾಗಿ ಓಡಾಡುವ ಸಾರ್ವಜನಿಕರ ಪ್ರಯಾಣವನ್ನು ದೃಷ್ಟಿಯಿಂದ ವಿವಿಧ ಮಾರ್ಗ ಗಳಲ್ಲಿ ವೈದ್ಯಕೀಯ ಚೆಕ್‌ಪೋಸ್ಟ್ ಗಳನ್ನು ನಿರ್ಮಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ.
ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮೆರಾ , ವಾಟರ್ ಪ್ರೂಫ್ಟೆಂಟ್, ಶಾಮಿಯಾನ ಅಳವಡಿಸಿ ಪೊಲೀಸ್, ಹೋಂ ಗಾರ್ಡ್ಸ್ ನಿಯೋಜಿ ಸಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೂಕ್ತ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಿ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಹೆಗ್ಗವಾಡಿ, ಪುಣಜನೂರು ಚೆಕ್‌ಪೋಸ್ಟ್‌ಗೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಂದ್ರ ಮೊ: 9449821499 ನೋಡಲ್ ಅಧಿಕಾರಿ, ಗುಂಡ್ಲುಪೇಟೆ ತಾಲೂಕಿನ ಹೀರೆಕಾಟಿ (ಬೇಗೂರು) ಮದ್ದೂರು (ಮೂಲೆಹೊಳೆ) ಮೇಲುಕಾಮನಹಳ್ಳಿ (ಕೆಕ್ಕನಹಳ್ಳ) ಕುರುಬರಹುಂಡಿ ಚೆಕ್‌ಪೋಸ್ಟ್‌ಗೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಮೊ: 9448562330 ನೋಡಲ್ ಅಧಿಕಾರಿ, ಹನೂರು ತಾಲೂಕಿನ ಪಾಲಾರ್, (ಮೆಟ್ಟೂರು ರಸ್ತೆ) ನಾಲ್ ರೋಡ್,
ಅರ್ಧನಾರಿಪುರ (ಒಡೆಯರಪಾಳ್ಯ) ಚೆಕ್ ಪೋಸ್ಟ್‌ಗೆ ಕೆಆರ್‌ಡಿಎಲ್ ಕಾರ್ಯಪಾಲಕ ಅಭಿಯಂತರ ಸುಂದರೇಶ್ ಮೂರ್ತಿ ಮೊ: 9449863071, 903661960 ನೋಡಲ್ ಅಧಿಕಾರಿ, ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ, ಬಾನಹಳ್ಳಿ (ಮೂಗೂರು ಗಡಿ) ಟಗರಪುರ ಚೆಕ್ ಪೋಸ್ಟ್‌ಗೆ ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ರಘು ಮೊ: 9480858124 ನೋಡಲ್ ಅಧಿಕಾರಿಯಾಗಿದ್ದಾರೆ. ಚೆಕ್‌ಪೋಸ್ rಗಳಿಗೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಪ್ರತಿನಿತ್ಯ ಚೆಕ್‌ಪೋಸ್ಟ್‌ಗಳಿಗೆ ಖುದ್ದು ಭೇಟಿ ನೀಡಿ ಫೋಟೊ ಸಹಿತ ಆಯಾ ದಿನವೇ ವರದಿ ಸಲ್ಲಿಸುವಂತೆ ಎಂದು ಡೀಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.