ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಗೆ ತೀರ್ಮಾನ
Team Udayavani, Jul 1, 2020, 6:25 AM IST
ಬೆಂಗಳೂರು: ರಾಜ್ಯ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಯಲ ಹಂಕ ವೃತ್ತದ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ “ವೀರ ಸಾವರ್ಕರ್’ ಹೆಸರಿಡುವ ಗೊಂದಲಕ್ಕೆ ಬಿಬಿಎಂಪಿ ನಿರ್ಣಯದ ಮೂಲಕ ತೀರ್ಮಾನ ಕೈಗೊಂಡಿದೆ. ಮಂಗಳವಾರ ಯಲಹಂಕ ವೃತ್ತದ ನೂತನ ಮೇಲ್ಸೇತುವೆಗೆ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ನಾಮಕರಣ ಮಾಡುವ ಸಂಬಂಧ ಪಾಲಿಕೆ ಸಭೆ ಸರ್ವಾನುಮತದ ನಿರ್ಣಯ ತೆಗೆದುಕೊಂಡಿತು.
ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ನಾಮಕರಣದ ನಿರ್ಣಯವನ್ನು ಪಾಲಿಕೆ ಸರ್ಕಾರಕ್ಕೆ ಸಲ್ಲಿಸಲಿದ್ದು, ಸರ್ಕಾರವು ಪಾಲಿಕೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಂತಿಮ ಆದೇಶ ಹೊರಡಿಸಲಿದೆ. ಮೇ 28ರಂದು ಯಲಹಂಕದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೈರಿ ವೃತ್ತದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ನಾಮಕರಣಕ್ಕೆ ಸರ್ಕಾರ ಮುಂದಾದ ಸಂದರ್ಭದಲ್ಲಿ ಪ್ರತಿಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಕೈಬಿಡಲಾಗಿತ್ತು.
ಮೌನಕ್ಕೆ ಜಾರಿದ ವಿರೋಧ ಪಕ್ಷ!: ಈ ಹಿಂದೆ ಹೆಸರು ನಾಮಕರಣಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿ ದ್ದ ವಿರೋಧ ಪಕ್ಷದ ಸದಸ್ಯರು ಮಂಗಳವಾರ ಆಡಳಿತ ಪಕ್ಷ ತೆಗೆದುಕೊಂಡ ನಿರ್ಣಯಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ. ಮೇ 20ಕ್ಕೆ ಪಾಲಿಕೆ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ನಾಮಕರಣಕ್ಕೆ ಸಂಬಂಧಿಸಿದಂತೆ 30 ದಿನ ಕಾಲಾವಕಾಶ ನೀಡಿ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಈ ಕುರಿತು ಎರಡು ಆಕ್ಷೇಪಣೆ ಬಂದಿದ್ದು, ಒಂದು ಆಕ್ಷೇಪಣೆ ಮಾತ್ರ ವೀರ ಸಾವರ್ಕರ್ ಹೆಸರು ಬೇಡ ಎಂದು ಸಲ್ಲಿಕೆ ಯಾಗಿದೆ. ಮತ್ತೂಂದು ಬದಲಿ ಹೆಸರಿಗೆ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.