ತೈಲ ಬೆಲೆ ಇಳಿಕೆಗೆ ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯ
Team Udayavani, Jul 1, 2020, 9:03 AM IST
ರಾಯಚೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ತಡೆಗೆ ಮತ್ತು ಕೋವಿಡ್ ಸೋಂಕಿತರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು. ಲಾಕ್ ಡೌನ್‌ನಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇಂದಿಗೂ ಪುನಶ್ಚೇತನ ಕಂಡಿಲ್ಲ. ಜನರಿಗೆ ಆದಾಯವೇ ಬರುತ್ತಿಲ್ಲ. ಇಂಥ ಸಮಯದಲ್ಲಿ ಸರ್ಕಾರ ತೈಲ ಬೆಲೆ ಹೆಚ್ಚಿಸುವ ಮೂಲಕ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದು ಟೀಕಿಸಿದರು.
ಸರ್ಕಾರದ ಪರಿಹಾರ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಈವರೆಗೂ ಜನರಿಗೆ ಪರಿಹಾರ ಸಿಕ್ಕಿಲ್ಲ. ತೈಲ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಾಗಲಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರೇ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದರು. ತೈಲ ಉತ್ಪನ್ನಗಳ ಮೇಲಿನ ಸುಂಕ ಕಡಿತಗೊಳಿಸಿ ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬರದ ಎಲ್ಲ ಕುಟುಂಬಗಳಿಗೆ ತಕ್ಷಣವೇ ಮುಂದಿನ ಆರು ತಿಂಗಳವರೆಗೆ ಪ್ರತಿ ತಿಂಗಳು 7500 ರೂ. ಸಹಾಯಧನ ನೀಡಬೇಕು. ಅಗತ್ಯವಿರುವ ಎಲ್ಲರಿಗೂ 10 ಕೆಜಿ ಆಹಾರ ಧಾನ್ಯಗಳ ಜೊತೆಗೆ 14 ಅಗತ್ಯ ವಸ್ತುಗಳ ಕಿಟ್‌ಗಳನ್ನು ಹಂಚಿಕೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.
ಕಾರ್ಯದರ್ಶಿ ಕೆ.ಜಿ.ವೀರೇಶ, ಸದಸ್ಯರಾದ ಕರಿಯಪ್ಪ ಹಚ್ಚೊಳ್ಳಿ, ಎಚ್.ಪದ್ಮಾ, ಡಿ.ಎಸ್.ಶರಣಬಸವ, ವರಲಕ್ಷ್ಮೀ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.