![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 1, 2020, 9:04 AM IST
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ 8 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂ. ದಂಡ ವಿಧಿಸಿ ನಗರದ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸದಸ್ಯರಾದ ಅಫ್ತಾಬ್ ಆಲಂ ಅಲಿಯಾಸ್ ಫಾರೂಕ್ ಹಾಗೂ ಅಹಮ್ಮದ್ ಜಮಾಲ್ ಶಿಕ್ಷೆಗೆ ಗುರಿಯಾಗಿದ್ದಾರೆ.
2010ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಫ್ತಾಬ್ ಹಾಗೂ ಜಮಾಲ್ ಆರೋಪಿಗಳಾಗಿದ್ದರು.
ಯಾಸಿನ್ ಭಟ್ಕಳ್ ಸಹಚರ ಸಹಿತ ನಾಲ್ವರು ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದರು. ಅವರಿಗೆ 2018ರಲ್ಲೇ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಅಫ್ತಾಬ್ ಮತ್ತು ಅಹಮದ್ ಕೂಡ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇನ್ನು ನಾಲ್ವರು ಆರೋಪಿಗಳಿದ್ದು, ಅವರ ವಿರುದ್ಧದ ನ್ಯಾಯಾಲಯದ ವಿಚಾರಣೆ ಮುಂದುವರಿದಿದೆ.
You seem to have an Ad Blocker on.
To continue reading, please turn it off or whitelist Udayavani.