ವಿದ್ಯಾನಗರ ಸೀಲ್‌ಡೌನ್
Team Udayavani, Jul 1, 2020, 10:46 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದುರ್ಗ: ಪಟ್ಟಣದ ನಿವಾಸಿಯೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ಟಿ.ಬಿ. ವೃತ್ತದ ಬಳಿಯ ವಿದ್ಯಾನಗರವನ್ನು ಸೀಲ್ ಡೌನ್ ಮಾಡಿದೆ.
ಶ್ರೀರಾಂಪುರ ಕೆಇಬಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾನಗರದ ವ್ಯಕ್ತಿಯೊಬ್ಬರಿಗೆ ಸೋಮವಾರ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಟ್ಟಣದ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಸೂಕ್ತ ವೈದ್ಯಕೀಯ ವ್ಯವಸ್ಥೆಯೊಂದಿಗೆ ತಾತ್ಕಾಲಿಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಕುಟುಂಬದವರನ್ನು ಬೇರೊಂದು ಕೊಠಡಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಾಲೂಕು ಆಡಳಿತದ ಮೂಲಗಳು ತಿಳಿಸಿದೆ.
ಕೋವಿಡ್ ದೃಢಪಟ್ಟಿರುವ ವ್ಯಕ್ತಿ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕಾಗಿ ಚಿಕಿತ್ಸೆ ಪಡೆದರೂ ಗುಣಮುಖರಾಗಲಿಲ್ಲ. ಹಾಗಾಗಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಚಿಕಿತ್ಸೆಗೆಂದು ತೆರಳಿದ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಶ್ರೀರಾಂಪುರ ಬೆಸ್ಕಾಂ ಕಚೇರಿಯ ಕೆಲವು ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಸೋಂಕು ನಿವಾರಣಾ ಔಷಧ ಸಿಂಪಡಿಸಲಾಗಿದೆ.
ವಿದ್ಯಾನಗರದ ಪಪೂ ಕಾಲೇಜು ಪಕ್ಕದ ರಸ್ತೆಯಲ್ಲಿಯೇ ರೋಗಿಯ ಮನೆ ಇರುವುದರಿಂದ ಮನೆಯಿಂದ 200 ಮೀಟರ್‌ವರೆಗೆ ಸೀಲ್ ಡೌನ್ ಮಾಡಿ ಸಾರ್ವಜನಿಕರ ಸಂಚಾರವನ್ನು ನಿಷೇಧಿಸಲಾಗಿದೆ. ಅಲ್ಲಿನ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಹೊಸದುರ್ಗ ಪಟ್ಟಣದ ಬೆಸ್ಕಾಂ ಮುಖ್ಯ ಕಚೇರಿಯ ಮುಖ್ಯದ್ವಾರಕ್ಕೆ ಬೀಗ ಹಾಕಿ ಸಾರ್ವಜನಿಕರಿಗೆ ಪ್ರವೇಶವನ್ನು ಮಂಗಳವಾರ ನಿಷೇಧಿಸಲಾಗಿತ್ತು. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಸಾಮಾಜಿಕ ಅಂತರದೊಂದಿಗೆ ಮಾಸ್ಕ್ ಧರಿಸಿ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ವಿನಾ ಕಾರಣ ಅಲೆದಾಡಬಾರದು ಎಂದು ತಾಲೂಕು ಆಡಳಿತದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.